Crime NewsLatestರಾಜಕೀಯ | Politicsರಾಜ್ಯ-Karnataka

ಪ್ರಜ್ವಲ್ ರೇವಣ್ಣ ಇಂದು ಮಂಗಳೂರಿಗೆ, ಶರಣಾಗ್ತಾರಾ?

ಬೆಂಗಳೂರು: ಸದ್ಯ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಇಂದು ಶರಣಾಗ್ತಾರಾ ಎಂಬ ಪ್ರಶ್ನೆ ಎದ್ದಿದೆ. ಇಂದು ರಾತ್ರಿ ಪ್ರಜ್ವಲ್ ಮಂಗಳೂರಿಗೆ ಬರಲಿದ್ದಾರೆ.

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ಡಿ ರೇವಣ್ಣ (HD.Reanna) ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ (SIT) ಸಿದ್ಧತೆ ನಡೆಸುತ್ತಿದೆ. ಅವರು ನಾಳೆ ಎಸ್‌ಐಟಿ ಮುಂದೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

https://youtu.be/HPmXeEmh748?si=jqYIwubP1lI94-MW

ಇಂದು ಮಂಗಳೂರು (Mangaluru) ವಿಮಾನ ನಿಲ್ದಾಣಕ್ಕೆ (Airport) ಪ್ರಜ್ವಲ್ ಆಗಮಿಸುವ ಸಾಧ್ಯತೆಯಿದೆ. ಸದ್ಯ ಪ್ರಜ್ವಲ್ ಯುಎಇಯಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲುಕೌಟ್ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ವಿಮಾನದಿಂದ ಇಳಿದು ವಲಸೆ ಕೇಂದ್ರದ ಬಳಿಯೇ ಬಂಧನವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕಿಡ್ನಾಪ್ ಕೇಸ್ ನಲ್ಲಿ ಹೆಚ್ ಡಿ ರೇವಣ್ಣ ವಶ

https://youtu.be/8r8XkFbaG34?si=_nKw2QZVA8U4Iudf

ಈಗಾಗಲೇ ಅಬುಧಾಬಿಯಿಂದ ಬೆಳಗ್ಗೆ 6:24ಕ್ಕೆ ಆಗಮಿಸಿದ ವಿಮಾನಲ್ಲಿ ಪ್ರಜ್ವಲ್ ಬಂದಿಲ್ಲ. ದುಬೈನಿಂದ ಆಗಮಿಸುವ ಎರಡನೇ ವಿಮಾನ ಬೆಳಗ್ಗೆ 7:55ಕ್ಕೆ ಲ್ಯಾಂಡ್ ಆಗಲಿದೆ. ದುಬೈನಿಂದ ಸಂಜೆ 6:15ಕ್ಕೆ ಮತ್ತೊಂದು ವಿಮಾನ ಬರಲಿದೆ. ಕುವೈಟ್‌ನಿಂದ 6:40ಕ್ಕೆ ವಿಮಾನ ಬರಲಿದೆ. ಈ ವಿಮಾನಗಳ ಪೈಕಿ ಒಂದು ವಿಮಾನದಲ್ಲಿ ಪ್ರಜ್ವಲ್ ಬಂದು ಶರಣಾಗಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

https://youtu.be/M2KHexb54ZM?si=b_L2pY-ktLx348JR
Share with Friends
author avatar
News Desk