Crime NewsLatestರಾಷ್ಟ್ರೀಯ-National

ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

ಶಿಲ್ಲಾಂಗ್: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ (Rape) ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯದ (Meghalaya) ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್‌ನ ನೊಂಗ್ತ್ಲಿವ್ ಗ್ರಾಮದಲ್ಲಿ ಶುಕ್ರವಾರ (Friday) ಘಟನೆ ನಡೆದಿದೆ. ಬಾಲಕಿ ಮನೆಯಲ್ಲಿದ್ದಾಗ ಇಬ್ಬರು ಆರೋಪಿಗಳು ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಬಾಲಕಿ ಕಿರುಚಾಟವನ್ನು ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಬಳಿಕ ಅಕ್ಕಪಕ್ಕದ ಮನೆಯವರು ಊರಿನ ಜನಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ನೂರಕ್ಕೂ ಅಧಿಕ ಮಂದಿ ಸೇರಿ ಇಬ್ಬರನ್ನು ಥಳಿಸಿದ್ದಾರೆ. ಪೊಲೀಸರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.ಇದನ್ನೂ ಓದಿ: ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

https://youtu.be/6pZh0UjUGDM?si=UeUJaHheF6q3DA1v

ಇಬ್ಬರಲ್ಲಿ ಒಬ್ಬ ತಿರೋತ್ ಸಿಂಗ್ ಎಂಬಾತ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊಬ್ಬ ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು. ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ ಅರಂಗ್ ಪೊಲೀಸ್ ಠಾಣೆಯ ಕಲೈ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಿಶ್ವವಿಖ್ಯಾತ ಮಹಿಳೆಯರು: ಅಕ್ಕಮಹಾದೇವಿ ಪತಿಯನ್ನು ಬಿಟ್ಟಿದ್ದೇಕೆ?

https://youtu.be/M2KHexb54ZM?si=m0zQJpn5g3ImW8lu
Share with Friends
author avatar
News Desk