Crime NewsLatestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ (Prajwal Revanna) ಎಸ್ಐಟಿ (SIT) ಮುಂದೆ ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಪೆನ್ ಡ್ರೈವ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ (Revanna) ಕುಟುಂಬಸ್ಥರು ಮತ್ತು ಆಪ್ತರು ಪ್ರಜ್ವಲ್‌ಗೆ ಒತ್ತಡ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿರುವ SIT

https://youtu.be/HPmXeEmh748?si=5RCWzYDQUlWzgxdZ

ಸದ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಭಾನುವಾರ ದುಬೈಯಿಂದ (Dubai) ಬೆಂಗಳೂರಿಗೆ ಬರಬೇಕಾಗಿದ್ದ ಪ್ರಜ್ವಲ್ ಇನ್ನೂ ಕೂಡ ಬಂದಿಲ್ಲ. ಈ ಸಂದರ್ಭದಲ್ಲಿ ವಿಚಾರಣೆಗೆ ಹಾಜರಾಗದೆ ಇದ್ದರೆ ಮತ್ತಷ್ಟು ತೊಂದರೆ ಎಂಬುದು ಕುಟುಂಬಸ್ಥರ ಅಭಿಪ್ರಾಯವಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಗೆದ್ರೆ ಖಂಡಿತ ಅನರ್ಹ ಮಾಡುತ್ತೇವೆ: ಆರ್. ಅಶೋಕ್

https://youtu.be/6pZh0UjUGDM?si=UasQbDbTJmYkkVkz

ವಿಡಿಯೋ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಈ ವೇಳೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ಇರುವುದು ಕುಟುಂಬ ಮತ್ತು ಪಕ್ಷಕ್ಕೆ ಮತ್ತಷ್ಟು ಮುಜುಗರವನ್ನು ಉಂಟುಮಾಡುತ್ತದೆ. ಮೊದಲು ಎಸ್??ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸು. ನಂತರ ಕಾನೂನು ಹೋರಾಟದಿಂದ ಪ್ರಕರಣದ ಸತ್ಯಾಂಶ ಹೊರಬರುತ್ತದೆ. ವಿಚಾರಣೆಗೆ ಹಾಜರಾಗದೆ ಕಾನೂನು ಹೋರಾಟಕ್ಕೆ ಮೊರೆ ಹೋದರೆ ಮತ್ತಷ್ಟು ಸಮಸ್ಯೆ ಆಗುತ್ತದೆ. ಈಗಾಗಲೇ ಈ ಪ್ರಕರಣದಿಂದ ಸಾಕಷ್ಟು ಡ್ಯಾಮೇಜ್ ಆಗುತ್ತಿದೆ. ಹೀಗಾಗಿ ಕೂಡಲೇ ವಕೀಲರ ಜೊತೆ ಸಮಾಲೋಚನೆ ನಡೆಸಿ ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು ಪ್ರಜ್ವಲ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಜೆಪಿ ನಡ್ಡಾ ವಿರುದ್ಧ ಬೆಂಗಳೂರಿನಲ್ಲಿ FIR ದಾಖಲು

Share with Friends
author avatar
News Desk