Crime NewsLatestಮಂಡ್ಯ-Mandyaರಾಜ್ಯ-Karnataka

ಮಂಡ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ಮಂಡ್ಯ: ಮಂಡ್ಯ ಜಿಲ್ಲೆಯ ಕೆಆರ್ ಪೇಟೆ (KR Pete) ತಾಲೂಕಿನ ಬೀಕನಹಳ್ಳಿಯಲ್ಲಿ ಸ್ವಾತಂತ್ರ‍್ಯ ಹೋರಾಟಗಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Kranti Veera Sangoli Rayanna) ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ.

ರಾಯಣ್ಣ ಪ್ರತಿಮೆಯ ಕೈಯಲ್ಲಿದ್ದ ಕತ್ತಿ ಮುರಿದು, ಕಾಲು ಸೇರಿದಂತೆ ವಿವಿಧ ಭಾಗಗಳನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಇದನ್ನೂ ಓದಿ:ಬೆಂಗಳೂರಲ್ಲಿ ಸುರಿದ ಮಳೆಗೆ ಬೆನ್ನು ಮೂಳೆ ಮುರಿದುಕೊಂಡ ಟೆಕ್ಕಿ

https://youtu.be/2xXPei1QvXY?si=V0DFvW-5Z5b1dm2S

ಕಳೆದ ವರ್ಷ ಗ್ರಾಮಸ್ಥರು ಈ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದರು. ತಡರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

https://youtu.be/4l1q5C2lYw4?si=hPUuCgRb8F43FLy6

ಪ್ರತಿಮೆ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ

Share with Friends
author avatar
News Desk