Crime NewsLatestಕೊಡಗು-Kodaguರಾಜ್ಯ-Karnataka

SSLC ವಿದ್ಯಾರ್ಥಿನಿ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ – ಇನ್ನೂ ಪತ್ತೆಯಾಗದ ರುಂಡ

ಕೊಡಗು: SSLC ವಿದ್ಯಾರ್ಥಿನಿಯ (Student) ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ (Police) ಕೈಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ (Arrest) .

ಮೀನಾಳ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿಯೊಂದಿಗೆ ಆರೋಪಿ ಕಾಡಿಗೆ ಪರಾರಿಯಾಗಿದ್ದ. ಬಳಿಕ ಆತನನ್ನು ಸೋಮವಾರಪೇಟೆ ಪೊಲೀಸ್ ಠಾಣೆಗೆ ಪೊಲೀಸರು ಕರೆತಂದಿದ್ದಾರೆ.ಇದನ್ನೂ ಓದಿ: ದೇವರಾಜೇಗೌಡ ಇಂದು ನ್ಯಾಯಾಧೀಶರ ಮುಂದೆ

https://youtu.be/Huo-fB975OQ?si=hixOjvU9qGE22BWA

ಅರೋಪಿ ಸೆರೆಯಾದರೂ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಹೆಚ್ಚಿನ ವಿಚಾರಣೆ ನಡೆಸಿ ನಂತರ ಮಾಹಿತಿ ನೀಡುವುದಾಗಿ ಎಸ್‌ಪಿ ರಾಮರಾಜನ್ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ಮದುವೆಗೆ ಅಡ್ಡಿಯಾದ ಜಾತಿ- ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಕೊಡಗಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾಳ ಭೀಕರ ಹತ್ಯೆಯಾಗಿತ್ತು. ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದಳು. ಆಕೆ ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ತನ್ನ ಶಾಲೆಗೆ 100% ಫಲಿತಾಂಶ ತಂದು ಕೊಟ್ಟಿದ್ದಳು. ಬೆಳಗ್ಗೆಯಿಂದಲೂ ಪಾಸಾದ ಖುಷಿಯಲ್ಲಿ ಇದ್ದ ಮೀನಾ, ಶಾಲೆಯತ್ತ ಬಂದು ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಪ್ರಕಾಶ್ ಹತ್ಯೆ ಮಾಡಿದ್ದ. ಇದನ್ನೂ ಓದಿ:ಬೆಂಗಳೂರಲ್ಲಿ ಮಳೆ ಅಬ್ಬರ; ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

https://youtu.be/lAoWpSgCBCs?si=OkOJME6KcBUjCCDf

ಹತ್ಯೆ ಮಾಡಿ ರುಂಡ-ಮುಂಡ ಬೇರ್ಪಡಿಸಿ ಆರೋಪಿ ಪರಾರಿಯಾಗಿದ್ದ. ರುಂಡದೊಂದಿಗೆ ಎಸ್ಕೇಪ್ ಆಗಿದ್ದ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಕೊನೆಗೂ ಪೊಲೀಸರ ಕೈಗೆ ಪ್ರಕಾಶ್ ಸಿಕ್ಕಿಬಿದ್ದಿದ್ದಾನೆ.ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆಗೆ ಕ್ಲಾಸ್ ತೆಗೆದುಕೊಂಡ ಚುನಾವಣಾ ಆಯೋಗ

https://youtu.be/PsNwh7YFS5Y?si=ZtUE-BBwcYRA0WqR
Share with Friends
author avatar
News Desk