Crime NewsLatestರಾಜಕೀಯ | Politicsರಾಜ್ಯ-Karnatakaಹಾಸನ-Hassan

ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವೀಡಿಯೋ ಬಿಡುಗಡೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ (BJP) ಮುಖಂಡ, ವಕೀಲ ದೇವರಾಜೇ ಗೌಡನನ್ನು (Devaraje Gowda) ಇಂದು ಬಂಧಿಸಲಾಗಿದೆ.

ದೇವರಾಜೇಗೌಡರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ನಗರಠಾಣೆ ಪೊಲೀಸರು ಇಂದು ಬಂಧಿಸಿದ್ದಾರೆ. ಪೊಲೀಸರು ಸತತ ನಾಲ್ಕೂವರೆ ಗಂಟೆ ವಿಚಾರಣೆ ನಡೆಸಿದ್ದಾರೆ.

https://youtu.be/PsNwh7YFS5Y?si=MyBla869755GWgG6

ದೇವರಾಜೇಗೌಡ ಅವರ ಹೇಳಿಕೆಯನ್ನು ಇನ್ನೂ ಪಡೆಯುವುದು ಬಾಕಿ ಇಲ್ಲ. ಹೇಳಿಕೆ ಪಡೆದ ನಂತರ ಅವರನ್ನು ಮೆಡಿಕಲ್ ಟೆಸ್ಟ್ಗೆ ಪೊಲೀಸರು ಕರೆದೊಯ್ಯಲಿದ್ದಾರೆ. ಬಳಿಕ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಒಂದೇ ಕುಟುಂಬದ 5 ಮಂದಿಯ ಕೊಲೆ- ತನ್ನವರನ್ನ ಕೊಂದು ತಾನು ಸತ್ತ

ಇತ್ತ ದೇವರಾಜೇಗೌಡ ಕಾರು ಚಾಲಕನನ್ನು ಕರೆದೊಯ್ದು ಪೊಲೀಸರು ಕಾರು ತಪಾಸಣೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಸಬ್‌ಇನ್ಸ್ಪೆಕ್ಟರ್ ಅಜಯ್‌ಕುಮಾರ್ ಅವರು ಕಾರಿನಲ್ಲಿದ್ದ ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಕಾರಿನಲ್ಲಿದ್ದ ಮೊಬೈಲ್ ಕೂಡ ವಶಕ್ಕೆ ಪಡೆದಿದ್ದಾರೆ. ಸದ್ಯ ದೇವರಾಜೇಗೌಡ ಕಾರು ಪೊಲೀಸರ ವಶದಲ್ಲಿದೆ. ಇದನ್ನೂ ಓದಿ: ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

https://youtu.be/lAoWpSgCBCs?si=3AIjyBqhMBIznSxR

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಶುಕ್ರವಾರ ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಪೊಲೀಸರ ಮಾಹಿತಿ ಮೇರೆಗೆ ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ದೇಶವನ್ನು ಹೆದರಿಸಲು ಕಾಂಗ್ರೆಸ್ ನಿರಂತರವಾಗಿ ಪ್ರಯತ್ನಿಸುತ್ತಿದೆ: ಮಣಿಶಂಕರ್ ಅಯ್ಯರ್ ಗೆ ಮೋದಿ ತಿರುಗೇಟು

https://youtu.be/Huo-fB975OQ?si=dxQyl3kWDaxVlAYt
Share with Friends
author avatar
News Desk