Crime NewsLatestರಾಜ್ಯ-Karnatakaರಾಷ್ಟ್ರೀಯ-National

ಟೈಯರ್ ಬ್ಲಾಸ್ಟ್ ಆಗಿ ಕ್ರೂಸರ್ ಪಲ್ಟಿ -ಮೂವರು ಮಹಿಳೆಯರ ದಾರುಣ ಸಾವು

ಚಿಕ್ಕೋಡಿ: ಟೈಯರ್ ಬ್ಲಾಸ್ಟ್ (Tyre Blast) ಆಗಿ ಕ್ರೂಸರ್ ವಾಹನ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು(Women) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ಸಾಂಗೋಲಾ- ಜತ್ತ ಮಾರ್ಗದ ಬಳಿ ನಡೆದಿದೆ.

ಮೃತ ಮಹಿಳೆಯರನ್ನು ಬೆಳಗಾವಿ (Belagavi) ಜಿಲ್ಲೆಯ ಅಥಣಿಯ ಬಳ್ಳಿಗೇರಿ ಗ್ರಾಮದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳೀಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆಗೆ ಶರಣು

https://youtu.be/Huo-fB975OQ?si=ifeSq9kRALGfrDjx

ಮಹಿಳೆಯರು ಬಳ್ಳಿಗೇರಿಯಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಹೆಣ್ಣು ಮಗುವೆಂದು ಮಾತ್ರೆ ಸೇವಿಸಿ ಗರ್ಭಪಾತ

Share with Friends
author avatar
News Desk