Crime NewsLatestಬೆಂಗಳೂರು ಗ್ರಾಮಾಂತರರಾಜ್ಯ-Karnataka

ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

ದೊಡ್ಡಬಳ್ಳಾಪುರ: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Dodaballapur) ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಲಾಜಿ (25) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ. ಇನ್‌ಸ್ಟಾಗ್ರಾಂ ಮೂಲಕ ಬಾಲಾಜಿಗೆ ಕಳೆದ ಒಂದು ವರ್ಷದ ಹಿಂದಿನಿಂದ ಮಂಡ್ಯ ಮೂಲದ ಯುವತಿಯ ಪರಿಚಯವಾಗುತ್ತದೆ. ಆ ಪರಿಚಯವು ಕ್ರಮೇಣ ಪ್ರೀತಿಗೆ ತಿರುಗಿದ್ದು, ಇಬ್ಬರು ಸಲುಗೆಯಿಂದ ತಿರುಗಾಡಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

https://youtu.be/lwT9p6w4n0U?si=gK2Cg3pU5bUqev4o

ಆದರೆ ಇದೀಗ ಯುವತಿ ತಾನು ಬೆರೊಬ್ಬ ಯುವಕನ ಜೊತೆ ಪ್ರೀತಿಯಲ್ಲಿ ಇರುವುದಾಗಿ ಹೇಳಿದ್ದಾಳೆ. ಇದನ್ನು ಕೇಳಿದ ಬಾಲಾಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಬಿಆರ್‌ಎಸ್‌ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ -ಮೇ 20ರವರೆಗೆ ವಿಸ್ತರಣೆ

ಮೃತ ಯುವಕನ ಶವವನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಮೃತನ ಸಂಬಂಧಿಕರ ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಚಿನ್ನದನಾಡಲ್ಲಿ ಸಾಲ ತೀರಿಸಲು ಗಂಡು ಮಗುವನ್ನ ಮಾರಿದ ತಂದೆ

https://youtu.be/Huo-fB975OQ?si=5sxxBo1dbNgpUzuQ

ಈ ಸಂಬAಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಜೈಲುವಾಸದಿಂದ ರೇವಣ್ಣನಿಗೆ ಮುಕ್ತಿ – ಪರಪ್ಪನ ಅಗ್ರಹಾರದಿಂದ ಬಿಡುಗಡೆ, ಲಾಠಿಚಾರ್ಜ್

Share with Friends
author avatar
News Desk