Crime NewsLatestರಾಷ್ಟ್ರೀಯ-National

ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!

ಚಂಡಿಗಢ: ಹರಿಯಾಣದ (Hariyana) ಕುಂಡಲಿ-ಮನೇಸರ್-ಪಲ್ವಾಲ್ (Kundali Manser Palwal Expressway) ಎಕ್ಸ್‌ಪ್ರೆಸ್‌ ವೇನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ (Fire Accident) 9 ಮಂದಿ ಭಕ್ತರು ಸಜೀವ ದಹನವಾಗಿರುವ ಘಟನೆ ಶನಿವಾರ (ಇಂದು) ನಸುಕಿನ ಜಾವದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನಕ್ಕೆ ತೀರ್ಥಯಾತ್ರೆಯಿಂದ ಕೈಗೊಂಡು ಹಿಂದಿರುಗುತ್ತಿದ್ದಾಗ ನುಹ್‌ ಪ್ರದೇಶದ ಬಳಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಭಕ್ತರು ಸುಟ್ಟು ಕರಕಲಾಗಿದ್ದಾರೆ. 9 ಮಂದಿ ಭಕ್ತರು ಸಜೀವ ದಹನ ಹೊಂದಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿಂದು RCB vs CSK ನಡುವೆ ಹೈವೋಲ್ಟೇಜ್‌ ಪಂದ್ಯ – ಪೊಲೀಸರಿಂದ ಬಿಗಿ ಭದ್ರತೆ

https://youtu.be/OMuk5-xqtY8?si=cGijlJSKuYcMqL4g

ಬಸ್‌ನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 60ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಪಂಜಾಬ್‌ ಮೂಲದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: “ಕಣ್ಣಪ್ಪ” ಚಿತ್ರಕ್ಕೆ ಕಾಜಲ್ ಎಂಟ್ರಿ

ಹೆಚ್ಚುತ್ತಿರುವ ಬೆಂಕಿಯನ್ನು ನೋಡಿದ ಬೈಕ್ ಸವಾರನೊಬ್ಬ ಬಸ್ ಅನ್ನು ಹಿಂಬಾಲಿಸಿ ನಿಲ್ಲಿಸಲು ಚಾಲಕನಿಗೆ ಎಚ್ಚರಿಕೆ ನೀಡಿದ್ದ. ಬಳಿಕ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಬಸ್‌ನ ಮುಂಭಾಗದಲ್ಲಿದ್ದ ಹಲವರನ್ನು ರಕ್ಷಿಸಲಾಯಿತು. ಬೆಂಕಿ ಕಾಣಿಸಿಕೊಳ್ಳಲಿರುವ ಕಾರಣ ಇನ್ನೂ ಪತ್ತೆಯಾಗಿಲ್ಲ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ

https://youtu.be/Z6BjQRIWnVA?si=kUActtqPjZZFBpW4

ಇದೇ ವೇಳೆ ಬಸ್ ಸಂಪೂರ್ಣ ಸುಟ್ಟು ಕರಕಲಾದ 3 ಗಂಟೆಗಳ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಿಮಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

Share with Friends
author avatar
News Desk