ಮಾಜಿ ಪ್ರಧಾನಿ ಹೆಚ್ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ಡಿ. ದೇವೇಗೌಡರಿಗೆ (Devegowda) ಇಂದು 92 ವರ್ಷದ ಹುಟ್ಟುಹಬ್ಬದ (Birthday) ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಅವರು ಇಂದು ಜೆ.ಪಿ ನಗರದ (JP Nagar) ಲಕ್ಷ್ಮಿ-ವೆಂಕಟೇಶ್ವರ ದೇವಸ್ಥನಕ್ಕೆ (Temple) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಬಹಿರಂಹಗ ಪತ್ರ ಬರೆದಿದ್ದರೆ.
ಮೇ 18 ರಂದು ಎಚ್ಡಿಡಿ ಅವರ 92ನೇ ಹುಟ್ಟುಹಬ್ಬವಿದ್ದು, ಆದರೆ ಅಂದು ಜನ್ಮಾದಿನಾಚರಣೆ ಆಚರಿಸಲ್ಲ ಎಂದ ಎಚ್ಡಿಡಿ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಈ ಬಾರಿ ನಾನು ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸುತ್ತಿಲ್ಲ, ತಾವು ಇದ್ದಲ್ಲಿಯೇ ನನಗೆ ಶುಭ ಹಾರೈಸಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ:ಪೆನ್ಡ್ರೈವ್ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ – ಕೊನೆಗೂ ಹೆಚ್ಡಿಡಿ ಪ್ರತಿಕ್ರಿಯೆ
ಪತ್ರದಲ್ಲಿ ಏನಿದೆ?
ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದರಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ. ಇದನ್ನೂ ಓದಿ:ಪ್ರಜ್ವಲ್ ಕಳಂಕ ತೊಳೆದುಕೊಳ್ಳುವವರೆಗೂ ಹೆಚ್ಡಿಡಿ ಕುಟುಂಬದವರು ರಾಜೀನಾಮೆ ಕೊಡಲಿ: ಪ್ರಿಯಾಂಕ್ ಖರ್ಗೆ
ಪ್ರಸ್ತಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್ಡಿಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೊರುತ್ತೇನೆ. ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ:ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ –ಆರೋಪಿ ಅಂದರ್
