Latestಚುನಾವಣೆ-Electionಮಂಡ್ಯ-Mandyaರಾಜಕೀಯ | Politicsರಾಜ್ಯ-Karnataka

ದೇವರಾಜೇಗೌಡ ಜೀವಕ್ಕೆ ಜೈಲಲ್ಲಿ ಕುತ್ತು: ಸುರೇಶ್ ಗೌಡ ಸ್ಫೋಟಕ ಹೇಳಿಕೆ

ಮಂಡ್ಯ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಕೀಲ ದೇವರಾಜೇಗೌಡ (DevarajeGowda) ಜೀವಕ್ಕೆ ಕಸ್ಟಡಿಯಲ್ಲಿರುವಾಗಲೇ ಅಪಾಯವಿದೆ ಎಂದು ಮಾಜಿ ಶಾಸಕ ಸುರೇಶಗೌಡ (Suresh Gowda) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಾಗಮಂಗಲದಲ್ಲಿ (Nagamandaladali) ಸುದ್ದಿಗಾರರೊಂದಿಗೆ ಮತನಾಡಿದ ಅವರು, ಈ ವೇಳೆ ಹಲವು ತಿಂಗಳುಗಳ ಕಾಲ ದೇವರಾಜೇಗೌಡರನ್ನು ಕಸ್ಟಡಿಯಲ್ಲೇ ಇಡಲು ಸಂಚು ನಡೆದಿದೆ. ಅವರ ಜೀವಕ್ಕೆ ದೊಡ್ಡ ಅಪಾಯವಿದೆ. ಇದು ನೂರಕ್ಕೆ ನೂರರಷ್ಟು ಸತ್ಯ. ಪ್ರಕರಣದ ಖಳನಾಯಕರು, ಸಚಿವರು ಭಯೋತ್ಪಾದಕರಂತೆ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್

https://youtu.be/NEfC4jep7Zg?si=TDK6NFODI6wlgSKN

ಸರ್ಕಾರದಿಂದ ಪೆನ್ ಡ್ರೈವ್ ಪ್ರಕರಣದ ಮೂಲ ರೂವಾರಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದುವರೆಗೆ ಅವರಿಗೆ ನೋಟಿಸ್ ನೀಡದೆ, ಬಂಧಿಸದೆ ಆಟ ಆಡುತ್ತಿದ್ದಾರೆ. ಇತ್ತ ದೇವರಾಜೇಗೌಡ ಅವರನ್ನು ಷಡ್ಯಂತ್ರ ಮಾಡಿ ಬಂಧನ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಸತ್ಯತೆ ಬೇಕಿಲ್ಲ. ಸಚಿವರ ಹೆಸರು ಹೇಳಿದ್ರೆ ಪರಿಗಣನೆ ಮಾಡಲ್ಲ. ಮೂಲ ಹುಡುಕಿ ತನಿಖೆಯನ್ನೂ ಮಾಡಲ್ಲ ಎಂದು ಅವರು ಆರೋಪಿಸಿದ್ದಾರೆ . ಇದನ್ನೂ ಓದಿ: ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

https://youtu.be/MyT8YPuUm_g?si=B99-z1m1wnzu1A-2
Share with Friends
author avatar
News Desk