Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿಗೆ ಮುಂದಾದ MEA

ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ (Passport) ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ (MEA) ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದೆ. ಎಸ್‌ಐಟಿಯಿಂದ(SIT) ಪಾಸ್‌ಪೋರ್ಟ್‌ ರದ್ದತಿ ಮನವಿ ಬಂದಿದ್ದು, ಹಾಗಾಗಿ ಪಾಸ್‌ಪೋರ್ಟ್‌ ರದ್ದತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೊಂದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ. ಇದನ್ನೂ ಓದಿ: ಒಂದೆಡೆ ಭವಾನಿ ರೇವಣ್ಣ SIT ನೋಟಿಸ್‌ಗೆ ಡೋಂಟ್‌ಕೇರ್‌, ಇನ್ನೊಂದೆಡೆ ಡ್ರೈವರ್ ನಾಪತ್ತೆ

https://youtu.be/SjqyqjIHY1A?si=C4Uvt6O5FBdCdBCw

ಮಹಿಳೆಯರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ಪ್ರಜ್ವಲ್‌ ರೇವಣ್ಣ ತಲೆ ಮರೆಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಎಸ್‌ಐಟಿ ನೋಟಿಸ್‌ ಕೊಟ್ಟರೂ ಕ್ಯಾರೇ ಎಂದಿಲ್ಲ. ಈ ಹಿನ್ನೆಲೆಯಲ್ಲಿ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಸಿಎಂ ಇವರೆಗೆ 2 ಬಾರಿ ಪ್ರಧಾನಿ ಪತ್ರ ಬರೆದಿದ್ದರು. ಜೊತೆಗೆ ಎಸ್‌ಐಟಿ ಕೂಡ ಪತ್ರ ಬರೆದಿತ್ತು. ಇದೀಗ ಪಾಸ್‌ಪೋರ್ಟ್‌ ರದ್ದತಿಗೆ MEA ಮುಂದಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿಗೆ, ಸಿಎಂ 2ನೇ ಪತ್ರ

https://youtu.be/CQ5L1vxidf0?si=Cg3Rsz6uH7N5F8JY
Share with Friends
author avatar
News Desk