Crime NewsLatestಬೆಳಗಾವಿ-Belagaviರಾಜ್ಯ-Karnataka

ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ

ಬೆಳಗಾವಿ: ನಗರದ ಅಳ್ವಾನ್ ಗಲ್ಲಿಯಲ್ಲಿ (Alwan Galli, Belagavi) ಕ್ರಿಕೆಟ್ (Cricket) ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಗಲಾಟೆಯ (fight) ವಾತಾವರಣ ಸೃಷ್ಟಿಯಾಗರುವ ಘಟನೆ ಗುರುವಾರ ಸಂಜೆ ೫ಗೆ ನಡೆದಿದೆ.

ಚಿಕ್ಕ ಮಕ್ಕಳ ನಡುವೆ ಸಂಜೆ ಸುಮಾರಿಗೆ ಕ್ರಿಕೆಟ್‌ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ನಂತರ 2 ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದಾರೆ. ಆ ಯುವಕರು ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ ಮಾಡಿದ್ದಾರೆ. ಯುವಕರ ನಡುವಿನ ಗಲಾಟೆಯಲ್ಲಿ 8 ಮಂದಿಗೆ ಗಾಯಗಳಾಗಿವೆ. ಎರಡೂ ಕಡೆಯವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

https://youtu.be/pVdn_MXOpaQ?si=8dVZczBUkWCyNmBI

ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆ ಅಮರ್‌ಗೂ ಗಾಯವಾಗಿದೆ. ಸದ್ಯ ಸ್ಥಳದಲ್ಲಿ ಕೆಎಸ್‍ರ್‍ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ. ಇನ್ನು ಘರ್ಷಣೆ ವಿಚಾರದ ಕುರಿತಂತೆ ಶಹಾಪುರ ಪೊಲೀಸ್ ಠಾಣೆಗೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಮಾರ್ಟಿನ್, ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಜೊತೆಗೆ ಎಲ್ಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಕಮಿಷನರ್ ಸೂಚನೆ ನೀಡಿದರು.ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

ನಗರದ ತುಂಬೆಲ್ಲಾ ರೌಂಡ್ಸ್, ಸೂಕ್ಷ್ಮ ಪ್ರದೇಶದಲ್ಲಿ ನಿಗಾ ವಹಿಸುವಂತೆಯೂ ಸೂಚನೆ ಕೊಟ್ಟಿದ್ದಾರೆ. ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಬಿಸಿಲಿಗೆ ಮೀನುಗಳ ಮಾರಣಹೋಮ

Share with Friends
author avatar
News Desk