Crime NewsLatestರಾಷ್ಟ್ರೀಯ-National

ಕಾಂಬೋಡಿಯಾದಲ್ಲಿ 60 ಮಂದಿ ಮೋಸದ ಉದ್ಯೋಗ ಜಾಲಕ್ಕೆ ; ಜಾಲಕ್ಕೆ ಸಿಲುಕಿದ್ದ ಭಾರತೀಯರ ರಕ್ಷಣೆ- ಸ್ವದೇಶಕ್ಕೆ ಮರಳಿದ ಮೊದಲ ಬ್ಯಾಚ್‌

ನವದೆಹಲಿ/ನಾಮ್ ಪೆನ್: ಉದ್ಯೋಗ (Job) ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ (Cambodia) ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ (Indians) ಇಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy) ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಕಾಂಬೋಡಿಯಾ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಸಿಹಾನೌಕ್ವಿಲ್ಲೆನಲ್ಲಿ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಜಿನ್‌ಬೆ-4 ಎಂಬ ಸ್ಥಳದಲ್ಲಿ ರಕ್ಷಣೆ ಭಾರತೀಯರನ್ನ ಮಾಡಿದ್ದಾರೆ. ಇನ್ಮುಂದೆ ಉದ್ಯೋಗಕ್ಕಾಗಿ ಕಾಂಬೋಡಿಯಾಕ್ಕೆ ಬರುವ ಭಾರತೀಯರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮೋದಿಸಿದ ಅಧಿಕೃತ ಏಜೆಂಟರ ಮೂಲಕ ಮಾತ್ರವೇ ಉದ್ಯೋಗ ಪಡೆದುಕೊಳ್ಳಬೇಕು ಎಂದು ಸಲಹೆಯನ್ನೂ ನೀಡಿದೆ. . ಇದನ್ನೂ ಓದಿ: ನಾನು ಪಾಲಿಗ್ರಾಫ್​ ಪರೀಕ್ಷೆಗೆ ಸಿದ್ಧ : ಸ್ವಾತಿ ಮಲಿವಾಲ್

ಈ ಕುರಿತು ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ನಮ್ಮ ಅಧಿಕಾರಿಗಳ ತಂಡ ವಿದೇಶದಲ್ಲಿರುವ ಭಾರತೀಯರಿಗೆ ಯಾವಾಗಲು ಸಹಾಯಕ್ಕೆ ಬದ್ಧವಾಗಿದೆ. ಸದ್ಯ ಮೋಸದ ಉದ್ಯೋಗ ಜಾಲಕ್ಕೆ (Job Scam )ಸಿಲುಕಿದ್ದ 60 ಮಂದಿಯನ್ನ ರಕ್ಷಿಸಿದ್ದೇವೆ. ಅವರಿಂದು ಸ್ವದೇಶಕ್ಕೆ ಮರಳಿದ್ದಾರೆ. ಅದಕ್ಕಾಗಿ ನಮ್ಮ ಇಡೀ ಅಧಿಕಾರಿಗಳ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದು ಹೇಳಿದೆ. . ಇದನ್ನೂ ಓದಿ: ಮಗು ಸತ್ತಿದ್ದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ- ಅಂತ್ಯಸಂಸ್ಕಾರದ ವೇಳೆ ಕೆಮ್ಮಿದ ಕಂದಮ್ಮ

ಜೊತೆಗೆ ಅವರು ಕಾಂಬೋಡಿಯಾದ ಸಿಹಾನೌಕ್ವಿಲ್ಲೆಯಿಂದ ನೋಮ್ ಪೆನ್‌ಗೆ ಕಳುಹಿಸಲು ಅಗತ್ಯ ದಾಖಲೆಗಳು ಹಾಗೂ ಇತರೇ ವ್ಯವಸ್ಥೆಗಳ ಸಹಾಯವನ್ನೂ ಅಧಿಕಾರಿಗಳು ಮಾಡಿಕೊಟ್ಟಿದ್ದಾರೆ. ಉದ್ಯೋಗ ಪಡೆಯುವ ಆಸೆಯಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದವರನ್ನ ರಕ್ಷಿಸಿ ಸಿಹಾನೌಕ್ವಿಲ್ಲೆ ನಿಂದ ನೋಮ್‌ಪೆನ್‌ಗೆ ಕಳುಹಿಸಲಾಗಿತ್ತು. ಬಳಿಕ ಪ್ರಯಾಣದ ದಾಖಲೆಗಳು ಸೇರಿದಂತೆ ಎಲ್ಲ ಸಹಾಯವನ್ನೂ ಒದಗಿಸಿಕೊಟ್ಟಿದೆ ಎಂದು ಕಚೇರಿ ತಿಳಿಸಿದೆ. . ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

https://youtu.be/EX8Otkuxgrk?si=BPsw8b03LGdaZwLW

ಇದೇ ವೇಳೆ ಕಾಂಬೋಡಿಯಾದಲ್ಲಿ ಉದ್ಯೋಗ ಹುಡುಕುತ್ತಿರುವ ಭಾರತೀಯರು ಅನಧಿಕೃತ ಏಜೆಂಟ್‌ಗಳಿಗೆ ಬಲಿಯಾಗದಂತೆ ರಾಯಬಾರಿ ಕಚೇರಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

Share with Friends
author avatar
News Desk