LatestWeatherಉಡುಪಿ-Udupiರಾಜ್ಯ-Karnataka

ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ನಿಷೇಧ

ಉಡುಪಿ: ಪೂರ್ವ ಮುಂಗಾರು ಮಳೆ (Rain) ಕರಾವಳಿಯಲ್ಲಿ (Karavali) ಅಬ್ಬರ ತೋರುತ್ತಿದೆ. ಅರಬ್ಬಿ ಸಮುದ್ರದ ಅಬ್ಬರ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಸೇಂಟ್ ಮೇರಿಸ್ ದ್ವೀಪಕ್ಕೆ (St. Mary’s Islands) ಪ್ರವಾಸಿಗರ ಪ್ರವೇಶಕ್ಕೆ (Entry) ಮುಂದಿನ 4 ತಿಂಗಳು ನಿರ್ಬಂಧ ಹೇರಿದೆ.

ಮುಂದಿನ 4 ತಿಂಗಳು ಯಾವುದೇ ಬೋಟುಗಳು, ದೋಣಿಗಳು ಸೇಂಟ್ ಮೇರಿಸ್ ದ್ವೀಪಕ್ಕೆ ಹೋಗಲ್ಲ. ಎಂದಿನಂತೆ ರಜೆ ಸಿಕ್ಕರೇ ರಾಜ್ಯದ ಮೂಲೆ ಮೂಲೆಯಿಂದ ಪ್ರವಾಸಕ್ಕೆಂದು ಜನ ಉಡುಪಿಗೆ ಬರುತ್ತಾರೆ. ನೀರಿನಲ್ಲಿ ಸಮುದ್ರದ ಅಲೆಗಳ ಜೊತೆಗೆ ಆಟವಾಡುವ ಆಸೆಗಳನ್ನು ಹೊತ್ತು ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ. ಇದನ್ನೂ ಓದಿ: ಇಂದು ಭಾರೀ ಮಳೆ ಸಾಧ್ಯತೆ- ಕೇರಳದಲ್ಲಿ 11 ಮಂದಿ ಸಾವು

ದ್ವೀಪದಲ್ಲಿ ವಿವಿಧ ಬಗೆಯ ಮನರಂಜನಾ ಕ್ರೀಡೆಗಳನ್ನು ಕೂಡ ನಿಷೇಧ ಮಾಡಲಾಗಿದೆ. ಸೇಂಟ್‍ಮೇರಿಸ್ ಪಿಕ್ ಪಾಯಿಂಟ್‍ನಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ತಬ್ಧ ಆಗಿದೆ. ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಕರಾವಳಿ ಪ್ರವಾಸಕ್ಕೆ ಬರುವವರು ತೀರದಿಂದಲೇ ಸಮುದ್ರ ನೋಡಿ ವಾಪಸ್ಸಾಗುತ್ತಿದ್ದಾರೆ. ಇದನ್ನೂ ಓದಿ: ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳ

https://youtu.be/U8u0xL467TE?si=LY3lawA8itaf-dgp
Share with Friends
author avatar
News Desk