ಇಂದಿನಿಂದ ಮೇ 30ರವರೆಗೆ ಬೆಂಗಳೂರು ಸೇರಿದಂತೆ ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬ್ರೇಕ್!
ಬೆಂಗಳೂರು: ರಾಜ್ಯಾದ್ಯಂತ ಮಳೆ (Rain) ಅಭಾವದಿಂದ ಕಂಗೆಟ್ಟಿದ್ದ ಜನಕ್ಕೆ ಪೂರ್ವ ಮುಂಗಾರು ತಂಪೆರೆದಿತ್ತು. ಕಳೆದ 15 ದಿನದಿಂದ ರಾಜ್ಯದಾದ್ಯಂತ ಅಬ್ಬರಿಸಿದ್ದ ವರುಣ ಸದ್ಯಕ್ಕೆ ತಾತ್ಕಾಲಿಕ ಬ್ರೇಕ್ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಮತ್ತೆ ಜೂನ್ ಮೊದಲ (June) ವಾರದ ಬಳಿಕ ಮುಂಗಾರು ಎಂಟ್ರಿಯಾಗಿ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮನಸೂಚನೆ ನೀಡಿದೆ.

ಉಳಿದಂತೆ ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಮೋಡ ಕವಿದ ವಾತಾವರಣ ಮತ್ತು ಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ಮಾತ್ರ ಯಲ್ಲೋ ಅಲರ್ಟ್ ನೀಡಲಾಗಿದ್ದು, ಕರಾವಳಿ ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ
ಮೇ 31, ಜೂನ್ 1ರ ಅವಧಿಯಲ್ಲಿ ಕೇರಳಕ್ಕೆ (Kerala) ಮುಂಗಾರು ಎಂಟ್ರಿ ಕೊಡಲಿದ್ದು, ಜೂನ್1 ರ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಈ ಭಾರೀ ಉತ್ತಮ ಮುಂಗಾರಿನ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಬಗ್ಗೆ ಸೂಚನೆ ನೀಡಿದೆ. ಇದನ್ನೂ ಓದಿ: ವಿದೇಶಕ್ಕೆ ಹೋಗುವಾಗ ನಿಮ್ಮ ಮಗ ನಿಮ್ಮ ಅನುಮತಿ ಪಡೆದಿದ್ದರೇ – ಸಿಎಂಗೆ ಹೆಚ್‍ಡಿಕೆ ಪ್ರಶ್ನೆ
