Crime NewsLatestರಾಷ್ಟ್ರೀಯ-National

ಐಆರ್‌ಎಸ್ ಅಧಿಕಾರಿಯ ಫ್ಲಾಟ್‍ನಲ್ಲಿ ಮಹಿಳೆಯ ಶವ ಪತ್ತೆ

ಲಕ್ನೋ: ಭಾರತೀಯ ಕಂದಾಯ ಇಲಾಖೆಯ (IRS) ಅಧಿಕಾರಿ ಸೌರಭ್ ಮೀನಾ ಅವರ ನೋಯ್ಡಾದ (Noida) ಅಪಾರ್ಟ್‍ಮೆಂಟ್‍ನಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯನ್ನು ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್‍ನ (ಬಿಹೆಚ್‍ಇಎಲ್) ಮಾನವ ಸಂಪನ್ಮೂಲ ಅಧಿಕಾರಿ ಶಿಲ್ಪಾ ಗೌತಮ್ ಎಂದು ಗುರುತಿಸಲಾಗಿದೆ. ಶಿಲ್ಪಾ ಹಾಗೂ ಸೌರಭ್ ಕಳೆದ ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದರು. ಅವರು ಡೇಟಿಂಗ್ ಅಪ್ಲಿಕೇಶನ್ (Dating app) ಮೂಲಕ ಪರಿಚಯವಾಗಿದ್ದು, ಸೌರಭ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ಮಂಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕರಿಂದ ನಮಾಜ್- ವೀಡಿಯೋ ವೈರಲ್

https://youtu.be/LURGOoe61NU?si=keJdcfLTc5qKA_Wq

ಶಿಲ್ಪಾಳ ತಂದೆ ಗೌತಮ್, ಸೌರಭ್ ವಿರುದ್ಧ ವಂಚನೆ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದು, ಆಗಾಗ ಆಕೆಯ ಮೇಲೆ ಹಲ್ಲೆ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ- ಡೆತ್‌ನೋಟ್‌ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ

https://youtu.be/AqV5IAqbY1A?si=x9nDyPlhhDGFh-oB

ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೇ ಇಬ್ಬರ ಮೊಬೈಲ್ ಫೋನ್‍ಗಳು ಹಾಗೂ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ತಮಿಳು ನಟ ಸಿಂಬು ಜೊತೆ ರೊಮ್ಯಾನ್ಸ್ ಗೆ ಜಾನ್ವಿ ಕಪೂರ್ ಸಜ್ಜು

Share with Friends
author avatar
News Desk