Health | ಆರೋಗ್ಯLatestರಾಷ್ಟ್ರೀಯ-National

ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆ

ಜೈಪುರ್: ರಾಜಸ್ಥಾನದಲ್ಲಿ (Rajasthan) ತೀವ್ರ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಇದೀಗ ಹೀಟ್ ಸ್ಟ್ರೋಕ್‍ನಿಂದ (Heatstroke) ಬಳಲುತ್ತಿರುವವರ ಸಂಖ್ಯೆ ಸೋಮವಾರ 2,809 ರಿಂದ 3,622ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ತೀವ್ರವಾದ ಶಾಖದ ಅಲೆಯ (Heatwave) ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ.

ಸೋಮವಾರ (ಮೇ 27) ರಾಜ್ಯದ ಫಲೋಡಿಯಲ್ಲಿ 49.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 6.3 ಡಿಗ್ರಿ ಹೆಚ್ಚಳವಾಗಿದೆ. ಜೈಪುರದಲ್ಲಿ (Jaipur) ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಭಾನುವಾರಕ್ಕಿಂತ 0.8 ಡಿಗ್ರಿ ಹೆಚ್ಚಾಗಿದೆ. ಕೋಟಾದಲ್ಲಿ ಗರಿಷ್ಠ ತಾಪಮಾನ 48.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ; ಅಪ್ರಾಪ್ತನ ರಕ್ತದ ಮಾದರಿ ವರದಿ ಬದಲಾಯಿಸಲು ವೈದ್ಯರಿಗೆ 3 ಲಕ್ಷ ಲಂಚ

https://youtu.be/dsSAhEc_2kQ?si=OIk5x6BzMJa7YtlY

ರಾಜ್ಯದ ಬಹುತೇಕ ಎಲ್ಲಾ ನಗರಗಳು 45 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚಿನ ತಾಪಮಾನವನ್ನು ದಾಖಲಿಸಿವೆ. ಅಜ್ಮೀರ್‍ನಲ್ಲಿ ಗರಿಷ್ಠ ತಾಪಮಾನ 46.3 ಡಿಗ್ರಿ ಸೆಲ್ಸಿಯಸ್, ಭಿಲ್ವಾರ್ (47.4), ಭರತ್‍ಪುರ (48.2), ಅಲ್ವಾರ್ (46.2), ಪಿಲಾನಿ (48.5), ಚಿತ್ತೋರ್‍ಗಢ (47), ಬಾರ್ಮರ್ (49.3), ಜೈಸಲ್ಮೇರ್ (48.7), ಜೋಧ್‍ಪುರ (47.4), ಬಿಕಾನೇರ್ (48.2), ಚುರು (48), ಶ್ರೀ ಗಂಗಾನಗರ (48.3), ಮತ್ತು ಧೋಲ್‍ಪುರದಲ್ಲಿ 48.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಅಲ್ಲದೇ ಇಂದು ಸಹ (ಮೇ 28 ರಂದು) ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಯಾವ ದೇಶದಿಂದ ಪ್ರಜ್ವಲ್‌ ವೀಡಿಯೋ ಬಂದಿದ್ದು – ವೀಡಿಯೋ ಬೆನ್ನತ್ತಿದ ಎಸ್‌ಐಟಿ

https://youtu.be/JPM-sUI8J_U?si=5MPDBz6E1uYSTE4R

ಪ್ರಸ್ತುತ ನಡೆಯುತ್ತಿರುವ ತೀವ್ರತರವಾದ ಬಿಸಿಗಾಳಿ ಪರಿಸ್ಥಿತಿಯು ಮುಂದಿನ 2-3 ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಮೇ 29ರಿಂದ ತಾಪಮಾನ ಕಡಿಮೆಯಾಗಲು ಆರಂಭವಾಗಲಿದ್ದು, ಜೂನ್ ಮೊದಲ ವಾರದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಸ್ಥಿತಿಯಲ್ಲಿರಲಿದೆ ಎಂದು ಜೈಪುರ್‌ನ ಹವಾಮಾನ ಇಲಾಖೆಯ (Meteorological Department) ನಿರ್ದೇಶಕ ಆರ್.ಎಸ್. ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

Share with Friends
author avatar
News Desk