Latestಕೃಷಿ-Agricultureಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಬಿತ್ತನೆ ಬೀಜದ ಬೆಲೆ ಏರಿಕೆ – ಕೃಷಿ ಸಚಿವರ ವಿರುದ್ಧ ಜೆಡಿಎಸ್ ಆಕ್ರೋಶ

ಬೆಂಗಳೂರು: ಬಿತ್ತನೆ ಬೀಜದ ಬೆಲೆ ಏರಿಕೆ (Seeds Price Hike) ಖಂಡಿಸಿ ಕೃಷಿ ಸಚಿವ ಮತ್ತು ಸರ್ಕಾರದ ವಿರುದ್ದ ಜೆಡಿಎಸ್ (JDS) ಆಕ್ರೋಶ ಹೊರಹಾಕಿದೆ.

ಶೇ 60%ರಷ್ಟು ಬಿತ್ತನೆ ಬೀಜದ ದರ ಹೆಚ್ಚಳವಾಗಿದೆ. ಸದ್ಯ ಕಾಂಗ್ರೆಸ್‌ ಪಂಚ ಗ್ಯಾರಂಟಿ ಕೊಟ್ಟು ಜನರನ್ನು ಉದ್ಧಾರ ಮಾಡಿದೆ ಎಂದು ಬೀಗುವ ಸರ್ಕಾರ ಮಾಡಿರುವ ಘನಕಾರ್ಯ ಇದು. ಒಂದು ಕೈಯ್ಯಲ್ಲಿ ಗ್ಯಾರಂಟಿ, ಇನ್ನೊಂದು ಕೈಯ್ಯಲ್ಲಿ ಸುಲಿಗೆ ಮಾಡುತ್ತಿರುವ ಘನಕಾರ್ಯವಿದು. ಕೊಟ್ಟ ಹಾಗೆ ಕೊಟ್ಟು, ಜನರಿಗೆ ಗೊತ್ತೇ ಆಗದಂತೆ ಜೇಬಿಗೆ ಕೈ ಹಾಕಿ ಪಿಕ್ ಪಾಕೆಟ್ ಮಾಡುತ್ತಿರುವ ಕಿಡಿಗೇಡಿ ಕೆಲಸ ಇದು ಎಂದು ಸರ್ಕಾರದ ವಿರುದ್ಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ಕಿಡಿಕಾರಿದೆ. ಇದನ್ನೂ ಓದಿ: ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

https://youtu.be/JPM-sUI8J_U?si=5MPDBz6E1uYSTE4R

ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಲಭ್ಯವಿದ್ದ ಬಿತ್ತನೆ ಬೀಜದ ಬೆಲೆ ಏರಿಕೆಯಾದ ಪರಿಣಾಮ, ಮುಕ್ತ ಮಾರುಕಟ್ಟೆಯಲ್ಲಿಯೂ ದರ ದುಪ್ಪಟ್ಟಾಗಿದೆ. ತಕ್ಷಣವೇ ಸರ್ಕಾರ ಬಿತ್ತನೆ ಬೀಜದ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಮುಕ್ತ ಮಾರುಕಟ್ಟೆಯಲ್ಲಿ ದರ ಏರಿಕೆಗೆ ನಿಯಂತ್ರಣ ವಿಧಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆ

https://youtu.be/CX3cL2Qp39Q?si=5LjiVb4u73VhioGy
Share with Friends
author avatar
News Desk