Latestಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ

ದೇವನಹಳ್ಳಿ: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Aiport) ಆಡಳಿತ ಮಂಡಳಿ, ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ‌ ಹಾಗೂ ಸಿಐಎಸ್ಎಫ್​ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ (Fake bomb)​ ಬೆದರಿಕೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್​ನಲ್ಲಿನ ಶೌಚಾಲಯದ ಕನ್ನಡಿ ಮೇಲೆ 25 ನಿಮಿಷದಲ್ಲಿ ಕಟ್ಟಡಗಳು ಸ್ಟೋಟವಾಗುವುದಾಗಿ ಬೆದರಿಕೆ ಸಂದೇಶ ಬರೆಯಲಾಗಿತ್ತು. ಬೆಳಗ್ಗೆ ಶೌಚಾಲಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಬರಹವನ್ನು ನೋಡಿದ್ದಾರೆ. ಕೂಡಲೆ ಈ ವಿಚಾರವನ್ನು ಭದ್ರತಾ ಪಡೆಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದಿಂದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರು ಸಾವು, ಓರ್ವ ಗಂಭೀರ

https://youtu.be/lBnyrlcdnBU?si=L7lBlOGUPNzTmxOE

ಪರಿಶೀಲನೆ ಬಳಿಕ ಹುಸಿ ಬಾಂಬ್ ಸಂದೇಶ ಅಂತ ತಿಳಿದ ಮೇಲೆ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಸಿಬ್ಬಂದಿಯೇ ಹುಸಿ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಕೇಜ್ರಿವಾಲ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

https://youtu.be/JTnogncfzfA?si=IBsR0U_9rnIHHuDd

ಏ.29 ರಂದು ವಿಮಾನ ನಿಲ್ದಾಣದ ಮ್ಯಾನೇಜರ್​​ ಅವರ ಮೇಲ್​ಗೆ “ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಸಂದೇಶ ಬಂದಿತ್ತು. ಇದನ್ನೂ ಓದಿ: ಹಿಂದೂ ಯುವಕನ ಹಲ್ಲೆ ಪ್ರಕರಣ- ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ ಅಮಾನತು

Share with Friends
author avatar
News Desk