LatestWeatherರಾಜ್ಯ-Karnataka

ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನ ಭರ್ಜರಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಿದೆ.

ಸದ್ಯ ಸಿಲಿಕಾನ್‌ ಸಿಟಿಯಲ್ಲಿ ಮಂಗಳವಾರ ಕೆಲವು ಕಡೆ ಮಳೆಯಾಗಿದ್ದು, ಇಂದು ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಮಳೆಯಾಹುವ ಸಾಧ್ಯತೆಯಿದೆ. . ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಅಬ್ಬರದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ನಾಳೆ, ನಾಡಿದ್ದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

https://youtu.be/lc15CaHVVn4?si=orOAaC9fYrtmUYSM

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: ದೆಹಲಿ-ಟೊರೊಂಟೂಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

https://youtu.be/bJ8aWd95gqc?si=2IqqZVwSLYqoM_4A
Share with Friends
author avatar
News Desk