Latestಚುನಾವಣೆ-Electionರಾಜಕೀಯ | Politicsರಾಷ್ಟ್ರೀಯ-National

ಮಂತ್ರಿ ಸ್ಥಾನಕ್ಕೆ ಒತ್ತಡ ಹಾಕಲ್ಲ ಎಂದ ಹೆಚ್‌ಡಿಕೆ

ನವದೆಹಲಿ: ನನಗೆ ಮಂತ್ರಿ ಸ್ಥಾನ ಬೇಕೆಂದು ನಾನು ಒತ್ತಡ ಹಾಕುವುದಿಲ್ಲ ಎಂದು ಮಂಡ್ಯ (Mandya MP) ಸಂಸದ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.

ಎನ್‌ಡಿಎ ಸಭೆಯಲ್ಲಿ (NDA Meeting) ಭಾಗವಹಿಸಲು ದೆಹಲಿಗೆ (Delhi) ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ, ಜೊತೆ ಮಾತನಾಡಿದರು. ನರೇಂದ್ರ ಮೋದಿ (Narendra Modi) ನಾಯಕತ್ವದಲ್ಲಿ ಮತ್ತೆ ಸರ್ಕಾರ ಮುಂದುವರಿಯಲಿದೆ. ಸಚಿವ ಸ್ಥಾನದ ಬಗ್ಗೆ ನನಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ಸ್ಥಳೀಯ ಪಕ್ಷಗಳಿಗೆ ಸಹ ಖಾತೆ ನೀಡುತ್ತಾರೆ. ನಮ್ಮಿಂದ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎನ್ನುವುದು ಹೈಕಮಾಂಡ್‌ಗೆ (High Command) ಗೊತ್ತಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಸಾಗರ್‌ ಖಂಡ್ರೆ ಗೆಲುವು – ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ

https://youtu.be/EN_1kRxjo-4?si=YbXUUbHNjEiHp4bw

ನಾಡಿನ ಜನತೆಗೆ, ದೇಶಕ್ಕೆ ಒಳ್ಳೆದಾಗುವ ಖಾತೆ ಸಿಕ್ಕಿದರೆ ಉತ್ತಮವಾಗಿ ಕೆಲಸ ಮಾಡಬಹುದು. ಡಾ. ಮಂಜುನಾಥ್‌ಗೆ (Dr Manjunath) ಖಾತೆ ನೀಡುವ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಇದನ್ನೂ ಓದಿ: ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಯಾರಾಗ್ತಾರೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ

https://youtu.be/S0u4JJ1Hrxg?si=oTIsvAKKM5rV1WyG

ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ನಾನು ನಾನು ಒತ್ತಡ ಹಾಕುತ್ತಿಲ್ಲ. ಅವರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ. ತೀರ್ಮಾನ ಏನಿದ್ದರೂ ಸಹ ಅವರದ್ದು ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು

Share with Friends
author avatar
News Desk