Latestರಾಜಕೀಯ | Politicsರಾಷ್ಟ್ರೀಯ-National

ಮೂರನೇ ಬಾರಿಗೆ ಮೋದಿ ಪಿಎಂ- ಭಾನುವಾರ ಸಂಜೆ 6 ಗಂಟೆಗೆ ಪ್ರಧಾನಿಯಾಗಿ ಪ್ರಮಾಣವಚನ

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ (Narendra Modi) ಮೂರನೇ ಬಾರಿಗೆ ಪ್ರಧಾನಿಯಾಗಿ (Prime Minister) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

ಇಂದು ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ (NDA) ಸಂಸದರ ಸಭೆ ನಡೆಯಿತು. ಈ ವೇಳೆ ಪ್ರಹ್ಲಾದ್‌ ಜೋಶಿ ಜೂನ್‌ 9 ರಂದು ರಾಷ್ಟ್ರಪತಿ ಭವನದಲ್ಲಿ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು. ಮೊದಲು ಶನಿವಾರ ಪ್ರಮಾಣ ವಚನ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಇದೀಗ ಭಾನುವಾರ ಪ್ರಮಾಣ ವಚನ ನಡೆಯಲಿದೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿದೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

https://youtu.be/SsmE2YqYo7g?si=DEZZSjlFRoY1MuUQ

ಎನ್‌ಡಿಎ (NDA) ಸಂಸದೀಯ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ, ನಾನು ಈಗಾಗಲೇ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದರು. ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಗೋವಾದಲ್ಲಿ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಯಿತು. ಆದರೆ ಇನ್ನೊಂದು ಸ್ಥಾನ ಗೆಲ್ಲಲು ಸಾಧ್ಯವಾಗದಿರುವುದು ಬೇಸರ ತಂದಿದೆ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು- 40% ಜಾಹೀರಾತು ಪ್ರಕರಣದಲ್ಲಿ ರಾಗಾಗೆ ರಿಲೀಫ್‌

https://youtu.be/S0u4JJ1Hrxg?si=l6ZKIWwCi1jhpehQ
Share with Friends
author avatar
News Desk