Latestಬೆಂಗಳೂರು-Bengaluruರಾಜ್ಯ-Karnataka

ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ – ಮತ್ತೊಮ್ಮೆ ಕಸ್ಟಡಿಗೆ ಕೇಳುವ ಸಾಧ್ಯತೆ

ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಎಸ್‍ಐಟಿ (SIT) ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಎಸ್‍ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‍ಗೆ (Court) ಹಾಜರುಪಡಿಸಲಿದ್ದಾರೆ.

ಸದ್ಯ ಇನ್ನು ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಮತ್ತೊಮ್ಮೆ ಪ್ರಜ್ವಲ್‌ ರೇವಣ್ಣ ಅವರನ್ನ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಪ್ರಕರಣದ ತನಿಖೆಯನ್ನ ಪ್ರತ್ಯೇಕವಾಗಿ ನಡೆಸುತ್ತಿರುವ ಎಸ್‍ಐಟಿ ಟೀಂ, ಸದ್ಯ ಈಗ ಹೊಳೆನರಸೀಪುರ ಟೌನ್ ಠಾಣೆ ಪ್ರಕರಣ ಸಂಬಂಧ ತನಿಖೆ ನಡೆಸ್ತಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಸಂಬಂಧ ಕಳೆದ ಹತ್ತು ದಿನಗಳಿಂದ ಪ್ರಜ್ವಲ್ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಮಂಡ್ಯಕ್ಕೆ ಮತ್ತೆ ಖುಲಾಯಿಸಿದ ಮಂತ್ರಿ ಲಕ್‌ – 25 ವರ್ಷದ ಬಳಿಕ ಕೇಂದ್ರದಲ್ಲಿ ಜೆಡಿಎಸ್‌ಗೆ ಮಂತ್ರಿ ಸ್ಥಾನ

https://youtu.be/vqst4url-zg?si=UuMA2LEtrVKZO05f

ಇದೇ ವೇಳೆ ವೈದ್ಯಕೀಯ ಪರೀಕ್ಷೆ, ಧ್ವನಿ ಪರೀಕ್ಷೆ ಕೂಡ ನಡೆಸಲಾಗಿದೆ. ಬಳಿಕ ಕೃತ್ಯ ಎಸಗಿದ ಸ್ಥಳ ಮಹಜರು ಕೂಡ ನಡೆದಿದೆ. ಒಂದು ಪ್ರಕರಣದ ತನಿಖೆಯನ್ನ ಎಸ್‍ಐಟಿ ಬಹುತೇಕ ಪೂರ್ಣಗೊಳಿಸಿದೆ. ಇದೀಗ ಇನ್ನುಳಿದ ಎರಡು ಕೇಸ್ ಸಂಬಂಧ ತನಿಖೆ ಶುರು ಮಾಡಿದೆ. ಸಿಐಡಿಯಲ್ಲಿ (CID) ಎರಡು ಪ್ರತ್ಯೇಕ ಕೇಸ್‍ಗಳು ದಾಖಲಾಗಿದ್ದು, ಅದರಲ್ಲಿ ಎಸ್‍ಐಟಿ ಒಂದು ಪ್ರಕರಣದ ತನಿಖೆ ಆರಂಭಿಸಲಿದೆ. ಹಾಗಾಗಿ ಕೋರ್ಟ್‍ಗೆ ಹಾಜರುಪಡಿಸಿ ಮತ್ತೊಮ್ಮೆ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಜೆಪಿ ವಿಜಯೋತ್ಸವ: ದುಷ್ಕರ್ಮಿಗಳ ಅಟ್ಟಹಾಸದಿಂದ ಇಬ್ಬರಿಗೆ ಚಾಕು ಇರಿತ

Share with Friends
author avatar
News Desk