EntertainmentLatestಸ್ಯಾಂಡಲ್​ವುಡ್-Sandalwood

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಸಿರಿ

‘ಬಿಗ್ ಬಾಸ್ ಕನ್ನಡ 10′ ಸ್ಪರ್ಧಿ ಸಿರಿ (Actress Siri) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸರಳವಾಗಿ ಮದುವೆ ಮಾಡಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ (Prabhar Boregowda) ಜೊತೆ ಸಿರಿ ಕುಟುಂಬಸ್ಥರ ಸಮುಖದಲ್ಲಿ ಹಸೆಮಣೆ (Wedding) ಏರಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಉದ್ಯಮಿ ಪ್ರಭಾಕರ್ ಮದುವೆ ಗುರುಹಿರಿಯರ ಸಮ್ಮುಖದಲ್ಲಿ ಜರುಗಿದೆ. ಪ್ರಭಾಕರ್ ಅವರು ಮೂಲತಃ ಮಂಡ್ಯದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದ್ದು, ಜೂನ್ 13ರಂದು ಸರಳವಾಗಿ ಮದುವೆ ನಡೆದಿದೆ. ಸದ್ಯ ನಟಿಯ ಮದುವೆ ಸುದ್ದಿ ಕೇಳಿ ಅಭಿಮಾನಿಗಳು ಶುಭಕೋರುತ್ತಿದ್ದಾರೆ.

Share with Friends
author avatar
News Desk