Crime NewsEntertainmentLatestಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ರೇಣುಕಾಸ್ವಾಮಿ ಕೊಲೆ ಕೇಸ್‌: – ಡೀಲ್‌ ಮಾಡಲಾಗಿದ್ದ 30 ಲಕ್ಷ ಹಣ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಹೆಸರು ಹೇಳದಿರಲು ಡೀಲ್‌ ಮಾಡಲಾಗಿದ್ದ 30 ಲಕ್ಷ ರೂ. ಹಣವನ್ನು ಪೊಲೀಸರು ಸೀಜ್‌ ಮಾಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಮಾಡಲು 30 ಲಕ್ಷ ರೂ. ಡೀಲ್‌ ಮಾಡಲಾಗಿತ್ತು. ಡೀಲ್‌ ಮಾಡಿದ ಹಣವನ್ನ ದರ್ಶನ್‌ ಆಪ್ತನೊಬ್ಬನ ಮನೆಯಲ್ಲಿ ಇರಿಸಲಾಗಿತ್ತು. ಇದೀಗ ಪೊಲೀಸರು ದಾಳಿ ನಡೆಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಹಣದ ಬಗ್ಗೆ ಬಾಯಿಬಿಟ್ಟಿದ್ದಾರೆ. ನಂತರ ಪೊಲೀಸರು ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳಲು, ಮೃತದೇಹ ಸಾಗಿಸಲು ಮತ್ತು ನಟ ದರ್ಶನ್‌ ಹೆಸರನ್ನು ಬಾಯಿಬಿಡದಿರಲು ಬಂಧಿತರ ಪೈಕಿ ಐವರಿಗೆ 30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು.

ಮೃತದೇಹ ಯಾರಿಗೂ ಸಿಗದಂತೆ ಸಾಗಿಸಲು ಮೂವರು ಆರೋಪಿಗಳಿಗೆ ಮುಂಗಡವಾಗಿ ಒಟ್ಟು 5 ಲಕ್ಷ ಸಂದಾಯ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳು ಜೈಲಿಗೆ ಹೋದ ಮೇಲೆ ಅವರ ಮನೆಯವರಿಗೆ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ:ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ

https://youtu.be/scaejbJlrAQ?si=pLoXEr4SXuc6eMVQ

ಜೂ.9 ರಂದು ಸುಮನಹಳ್ಳಿ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್‌ ಸಮೀಪದ ಮೋರಿ ಬಳಿ ಸಿಕ್ಕಿದ ರೇಣುಕಾಸ್ವಾಮಿ ಮೃತದೇಹ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

Share with Friends
author avatar
News Desk