Crime NewsLatestಬೆಂಗಳೂರು-Bengaluruರಾಜ್ಯ-Karnataka

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಡಿ ಗ್ಯಾಂಗ್‌ನ ಮತ್ತಿಬ್ಬರು ಅರೆಸ್ಟ್

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ಆರೋಪಿ ದರ್ಶನ್ (Darsha) ಗ್ಯಾಂಗ್‍ನ ಮತ್ತಿಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿದ್ದ ಎ6 ಜಗ್ಗ ಅಲಿಯಾಸ್ ಜಗಧೀಶ್ ಹಾಗೂ ಎ7 ಅನಿ ಅಲಿಯಾಸ್ ಅನಿಲ್ ಎಂಬ ಇಬ್ಬರು ಆರೋಪಿಗಳನ್ನ ಪೊಲಿಸರು ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಹಾಗೂ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

https://youtu.be/scaejbJlrAQ?si=YkkKwH9T5EZn8Ko4

ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣದಲ್ಲಿ ದರ್ಶನ್, ಗೆಳತಿ ಪವಿತ್ರಾ (Pavithra Gowda) ಗೌಡ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಸದ್ಯ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಕೇಂದ್ರ ಸ್ಥಾನವನ್ನ ರಾಜ್ಯದ ಜನರಿಗೆ ಅರ್ಪಣೆ – ಹೆಚ್‌ಡಿಕೆ ಭಾವುಕ

https://youtu.be/MqYiVxcb02I?si=2pxuD_nT5NR8f9XL

Share with Friends
author avatar
News Desk