LatestWeatherಬೆಂಗಳೂರು-Bengaluruರಾಜ್ಯ-Karnataka

ರಾಜ್ಯದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು

ಬೆಂಗಳೂರು: ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು(Monsoon) ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳುರು ಸೇರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೀಗ ಜೂನ್‌ 21 ರ ಬಳಿಕ ಮುಂಗಾರು ಮತ್ತಷ್ಟು ಚುರುಕುಗೊಲ್ಳಿದೆ ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಈಜಾಡಲು ಹೋಗಿ ಮೃತಪಟ್ಟಿದ ವಿದ್ಯಾರ್ಥಿಯ ಶವ ಪತ್ತೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ರೈಲು ಅಪಘಾತ – ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು

https://youtu.be/ONvTqkOkI04?si=xlHRkRVGXeubm2bJ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಹ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

https://youtu.be/aU2T6ruBgE0?si=Cta5sqtqLUJILsdh
Share with Friends
author avatar
News Desk