Crime NewsLatestರಾಷ್ಟ್ರೀಯ-National

ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ, ರಾಷ್ಟ್ರಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal Train Accident) ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi), ರಾಷ್ಟ್ರಪತಿ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

ಜೊತೆಗೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ. ಇನ್ನು ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ

https://youtu.be/N2-OdvZAPc0?si=tP1gP_EGsPIHwHVH

ಇನ್ನೂ ಈ ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯ ಮಾಜಿ ವಿಧಾನ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Share with Friends
author avatar
News Desk