Crime NewsLatestಬೆಂಗಳೂರು-Bengaluruರಾಜ್ಯ-Karnataka

ಪೋಕ್ಸೋ ಕೇಸ್‌ – ಸಿಐಡಿಯಿಂದ ಸತತ 2 ಗಂಟೆ ವಿಚಾರಣೆ ಎದುರಿಸಿದ ಬಿಎಸ್‌ವೈ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ (POCSO Case) ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಂದು ಸಿಐಡಿ ವಿಚಾರಣೆ ಎದುರಿಸಿದ್ದಾರೆ.

ಬೆಂಗಳೂರಿನ ಸಿಐಡಿ ಕಚೇರಿಯಲ್ಲಿಂದು ಸತತ 2 ಗಂಟೆ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಪುನೀತ್ ವಿಚಾರಣೆ ನಡೆಸಿದ್ದು, ಹಲವು ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ವಿಚಾರಣೆ ಮುಗಿದ ಬಳಿಕ ಬಿಎಸ್‌ವೈ ಸಿಐಡಿ ಕಚೇರಿಯಿಂದ ದವಳಗಿರಿ ನಿವಾಸಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಡಿ ಗ್ಯಾಂಗ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

https://youtu.be/ONvTqkOkI04?si=Z0Ji014yu1NzhhBi

ಪ್ರಕರಣವೇನು?
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್‌ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಕಳೆದ ತಿಂಗಳು ದೂರುದಾರೆ ಮೃತಪಟ್ಟಿದ್ದರು. ಇದನ್ನೂ ಓದಿ: ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ, ರಾಷ್ಟ್ರಪತಿ

https://youtu.be/N2-OdvZAPc0?si=5UY-uHHYMmfg6nHP

ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣ ಕೈಗೆತ್ತಿಕೊಂಡಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದರು. 41(O) ಸಿಆರ್‌ಪಿಸಿ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬೆನ್ನಲ್ಲೇ ಸರ್ಕಾರದ ವಿಶೇಷ ಅಭಿಯೋಜಕರಾಗಿ ಅಶೋಕ್ ನಾಯ್ಕ್ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕನ್ನಡಿಗ ನೇಮಕ

https://youtu.be/aU2T6ruBgE0?si=Uxk_1lrZndnfyTMS

ನೋಟಿಸ್‌ ಜಾರಿಯಾದ ಒಂದು ದಿನದ ಬಳಿಕ ಬಿಎಸ್‌ವೈ ವಿರುದ್ಧವೇ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರಿಂದ ಬಂಧನಕ್ಕೆ ಸಿದ್ಧತೆ ನಡೆದಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಬಂಧನಕ್ಕೆ ತಡೆ ನೀಡಿತ್ತು.

Share with Friends
author avatar
News Desk