Latestರಾಷ್ಟ್ರೀಯ-National

ಎನ್‍ಕೌಂಟರ್‌ನಲ್ಲಿ ಹೊಂಚು ಹಾಕಿ ಕುಳಿತಿದ್ದ ನಾಲ್ವರು ನಕ್ಸಲರ ಹತ್ಯೆ

ರಾಂಚಿ: ಜಾರ್ಖಂಡ್‌ನ (Jharkhand) ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ನಡೆಸಿದ ಎನ್‍ಕೌಂಟರ್‌ಲ್ಲಿ (Encounter) ಹೊಂಚು ಹಾಕಿ ದಾಳಿ ನಡೆಸಲು ತಯಾರಾಗಿದ್ದ ನಾಲ್ವರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಹತ್ಯೆಗೀಡಾದವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ ಜಿಲ್ಲೆಯ ತೋಂಟೊ ಮತ್ತು ಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ವೇಳೆ ಎನ್‍ಕೌಂಟರ್ ನಡೆದಿದೆ. ಈ ವೇಳೆ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ನಾಲ್ವರು ನಕ್ಸಲರು ಬಲಿಯಾಗಿದ್ದಾರೆ. ಎನ್‍ಕೌಂಟರ್ ಬಳಿಕ ಇಬ್ಬರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ : ಬಿ.ಸಿ ಪಾಟೀಲ್‌

https://youtu.be/N2-OdvZAPc0?si=M1AIpBYrOOg_dbMX

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಾರ್ಖಂಡ್‌ನ ಪೊಲೀಸ್ ಐಜಿ (ಕಾರ್ಯಾಚರಣೆ) ಅಮೋಲ್ ವಿ ಹೋಮ್ಕರ್ ಅವರು, ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ನಾಲ್ವರು ಎನ್‍ಕೌಂಟರ್ ವೇಳೆ ಬಲಿಯಾಗಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡುವುದರಿಂದ ಪ್ರಯೋಜನವಿಲ್ಲ : ಬಿ.ಸಿ ಪಾಟೀಲ್

https://youtu.be/aU2T6ruBgE0?si=PF7VfxZYBGNp_0nz

ಭದ್ರತಾ ಪಡೆಯ ಗುಂಡಿಗೆ ಬಲಿಯಾದವರು ಝೋನಲ್ ಕಮಾಂಡರ್, ಸಬ್ ಜನರಲ್ ಕಮಾಂಡರ್, ಏರಿಯಾ ಕಮಾಂಡರ್ ಮತ್ತು ಇನ್ನೊಬ್ಬರು ಮಹಿಳಾ ಸದಸ್ಯರಾಗಿದ್ದಾರೆ. ಎನ್‍ಕೌಂಟರ್ ನಂತರ, ಭದ್ರತಾ ಪಡೆಗಳು ಇಬ್ಬರು ನಕ್ಸಲರನ್ನು ಬಂಧಿಸಿದ್ದು, ಬಂಧಿತರು ಎನ್‍ಕೌಂಟರ್ ನಡೆದ ಪ್ರದೇಶದ ಕಮಾಂಡರ್ ಮತ್ತು ಮತ್ತೋರ್ವರು ತೀವ್ರಗಾಮಿ ಮಹಿಳಾ ನಕ್ಸಲೈಟ್ ಆಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆರೋಪಿಯಷ್ಟೇ, ಅಪರಾಧಿಯಾಗಿಲ್ಲ- ಅನುಷಾ ರೈ ರಿಯಾಕ್ಷನ್

https://youtu.be/ONvTqkOkI04?si=ypf8dMlvkjWqWN_0

ಮೇ 13 ರಂದು ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ನಂತರ ನಡೆದ ಎರಡನೇ ಎನ್‍ಕೌಂಟರ್ ಇದಾಗಿದೆ. ಮೇ 23 ರಂದು ನಡೆದ ಎನ್‍ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ಆಗಿದ್ದ ಬುಧ್ರಾಮ್ ಮುಂಡಾ ಹತ್ಯೆಗೀಡಾಗಿದ್ದ.ಇದನ್ನೂ ಓದಿ: ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ, ರಾಷ್ಟ್ರಪತಿ

Share with Friends
author avatar
News Desk