LatestWeatherಬೆಂಗಳೂರು-Bengaluruರಾಜ್ಯ-Karnataka

ಇಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ‌ ಸಹಿತ ಮಳೆಯಾಗಲಿದೆ ಎಂದು (Rain) ಹವಾಮಾನ ಇಲಾಖೆ (IMD) ಎಚ್ಚರಿಕೆಯನ್ನು ನೀಡಿದೆ.

ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇಂದು ಕೂಡ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಈಗಾಗಲೇ ಜೂನ್ 29ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಹಾಗೂ ಕರಾವಳಿ ಪ್ರದೇಶಗಳಿಗೆ ಇಂದು ಕೂಡ ಆರೆಂಜ್ ಅಲರ್ಟ್ ಮುಂದುವರಿಕೆ ಮಾಡಲಾಗಿದೆ. ಇದನ್ನೂ ಓದಿ: ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ, ಹದಗೆಟ್ಟ ಆರೋಗ್ಯ – ದೆಹಲಿ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

https://youtu.be/97Xqp_kxIBQ?si=86V9GTrix0FCkf0I

ನಿನ್ನೆಯೂ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಸೋಮವಾರ ಶಿವಮೊಗ್ಗದ ಆಗುಂಬೆಯಲ್ಲಿ ಅತಿ ಹೆಚ್ಚಾಗಿ ಮಳೆ ಸುರಿದಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಔಟ್

https://youtu.be/OvXrOZlPR8I?si=hoR3NPbK0xViegVg
Share with Friends
author avatar
News Desk