ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ
ಅಯೋಧ್ಯೆ: ಕಳೆದ ವರ್ಷ ಜನವರಿ 22ರಂದು ಲೋಕಾರ್ಪಣೆಗೊಂಡ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ (Ram Mandir sanctum) ಶನಿವಾರ ಭಾರೀ ಮಳೆಗೆ ಸೋರಿಕೆ ಕಂಡುಬಂದಿದೆ. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಅವರು ಮಳೆ ನೀರು ಸೋರಿಕೆ ಖಚಿತಪಡಿಸಿದ್ದು, ದೇವಸ್ಥಾನ ನಿರ್ಮಾಣ ಕಾರ್ಯದಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಮಳೆಗೆ (Rain In Ayodhya) ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ನೀರು ಸೋರಿಕೆಯಾಗಿದೆ. ಮಳೆಗೆ ದೇವಸ್ಥಾನದ ಪವಿತ್ರ ಗರ್ಭಗುಡಿಯ ಚಾವಣಿಯಿಂದ ತೀವ್ರ ಸೋರಿಕೆಯಾಗಿದೆ. ಬಾಲರಾಮನ ವಿಗ್ರಹದ ಮುಂದೆ ಅರ್ಚಕರು ಕೂರುವ ಸ್ಥಳದಲ್ಲಿ, ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದಲ್ಲಿಯೂ ನೀರು ಬೀಳುತ್ತಿದೆ. ಮಳೆಯ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯೂ ಇಲ್ಲ. ಹಿರಿಯ ಅಧಿಕಾರಿಗಳು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಚಾರ್ಯ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಸ್ತೆಗಾದ್ರೂ ಇಳಿಲಿ ಬೀದಿಗಾದ್ರೂ ಇಳಿಲಿ, KMF ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು: ಭೀಮಾನಾಯ್ಕ್

ದೇಶದ ಮೂಲೆ ಮೂಲೆಯಿಂದ ಬಂದ ಇಂಜಿನಿಯರುಗಳು ಶ್ರೀರಾಮ ಮಂದಿರ ನಿರ್ಮಿಸುತ್ತಿರುವುದು ಬಹಳ ಅಚ್ಚರಿ ಮೂಡಿಸುತ್ತಿದೆ. ಜನವರಿ 22ರಂದು ಮಂದಿರವನ್ನು ಉದ್ಘಾಟಿಸಲಾಗಿತ್ತು. ಆದರೆ ಮಳೆ ಬಂದರೆ ಚಾವಣಿ ಸೋರಲಿದೆ ಅಂತ ಯಾರಿಗೂ ತಿಳಿದಿರಲಿಲ್ಲ. ವಿಶ್ವ ಪ್ರಸಿದ್ಧ ದೇವಸ್ಥಾನದ ಚಾವಣಿ ಸೋರುತ್ತಿರುವುದು ಅಚ್ಚರಿಯ ವಿಷಯ. ಇದು ಏಕೆ ಆಯಿತು? ದೊಡ್ಡ ದೊಡ್ಡ ಇಂಜಿನಿಯರುಗಳಿದ್ದೂ ಇಂತಹ ಘಟನೆ ನಡೆದಿರುವುದು ದೊಡ್ಡ ತಪ್ಪು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪ್ರೀತಂ ಗೌಡಗೆ ಯಾವುದೇ ಕ್ಷಣದಲ್ಲಾದ್ರೂ ಎಸ್‌ಐಟಿ ನೋಟಿಸ್ ನೀಡುವ ಸಾಧ್ಯತೆ
ಬಾಲರಾಮನ ವಿಗ್ರಹ ಪ್ರತಿಷ್ಠಾಪಿಸಲಾದ ಗರ್ಭಗುಡಿಯ ಮೇಲ್ಚಾವಣಿ, ಶನಿವಾರ ರಾತ್ರಿ ಸುರಿದ ಮಳೆಗೆ ನೀರು ಸೋರಿಕೆಯಾಗಿದೆ. ಹೀಗಾಗಿ ಗರ್ಭಗುಡಿಯಲ್ಲಿ ನೀರು ತುಂಬಿಕೊಂಡಿದ್ದು, ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಮಂದಿರ ನಿರ್ವಹಣಾ ಸಿಬ್ಬಂದಿ ಸೋರಿಕೆಯಾಗಿರುವ ಗರ್ಭಗುಡಿಯ ಮೇಲ್ಚಾವಣೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.

ಮೇಲ್ಛಾವಣಿ ಸೋರಿಕೆ ಬಗ್ಗೆ ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರಿಗೆ ತಿಳಿಸಿದ ಬಳಿಕ ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ ಅದನ್ನು ವಾಟರ್‌ಫ್ರೂಫ್‌ಗೊಳಿಸಲು ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ – ಪ್ರಜ್ವಲ್, ಪ್ರೀತಂ ಗೌಡ ವಿರುದ್ಧ ಎಫ್ಐಆರ್ ದಾಖಲು
