Latestರಾಷ್ಟ್ರೀಯ-National

ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ (Doda Encounter) ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು (ಬುಧವಾರ) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು (Terrorists Attack) ಹತರಾಗಿದ್ದಾರೆ.

ಜೂನ್ 11 ಮತ್ತು 12ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ನಡುವೆ ಬೆಳಿಗ್ಗೆ 9.50ರ ಸುಮಾರಿಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

https://youtu.be/97Xqp_kxIBQ?si=Ch2gGjgJ38z5izX2

ಜೂನ್ 11ರಂದು ಚತ್ತರಗಲ್ಲದ ಜಂಟಿ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದರಿಂದ 6 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರೆ, ಮರುದಿನ ಗಂಡೋ ಪ್ರದೇಶದ ಕೋಟಾ ಮೇಲ್ಭಾಗದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

https://youtu.be/OvXrOZlPR8I?si=qOdYPwC7ZfPmEQ-Z

ಅವಳಿ ದಾಳಿಯ ನಂತರ ಭದ್ರತಾ ಪಡೆಗಳು ತಮ್ಮ ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದವು. ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆ ವೇಳೆ ಅಡಗಿಕೊಂಡಿದ್ದ ಭಯೋತ್ಪಾದಕರಿಂದ ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಯಿತು ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ

Share with Friends
author avatar
News Desk