Crime NewsEntertainmentLatest

ಫ್ಯಾನ್ಸ್‌ ಜೈಲಿನ ಬಳಿ ಬರಬೇಡಿ: ನಟ ದರ್ಶನ್‌ ಅಭಿಮಾನಿಗಳಿಗೆ ಮನವಿ

ಬೆಂಗಳೂರು: ಯಾರು ಕೂಡ ಜೈಲಿನ ಬಳಿ ಬರಬೇಡಿ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ (Darshan), ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

‘ಅಭಿಮಾನಿಗಳು ಯಾರೂ ಜೈಲಿಗೆ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಯಾರು ಕೂಡ ಜೈಲಿನ ಬಳಿ ಬರಬೇಡಿ’ ಎಂದು ಜೈಲಿನಿಂದಲೇ ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿ ಕೇಳಿಕೊಂಡಿದ್ದಾರೆ.

ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ. ಅದರಲ್ಲೂ ನಿನ್ನೆ ವಿಶೇಷಚೇತನ ಯುವತಿ ಸೌಮ್ಯಾ ಭೇಟಿಗೆ ಆಗಮಿಸಿದ್ದ ಬಗ್ಗೆ ಬೇಸರವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಂದಿನ 2 ದಿನಗಳ ಕಾಲ ಮಳೆಯ ಮೂನ್ಸೂಚನೆ

https://youtu.be/DF5yh4qa8x8?si=MwNc0l3MGsPq4mRk

ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಸೌಮ್ಯಾ ಹಠ ಮಾಡಿದ್ದರು. ಅನ್ನ, ಆಹಾರ ಸೇವಿಸದೇ ಹಠ ಹಿಡಿದಿದ್ದರು. ನಟ ದರ್ಶನ್ ‌ಕೊಡಿಸಿದ್ದ ಆಟೋದಲ್ಲಿ ಪೋಷಕರ ಜೊತೆ ಆಗಮಿಸಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಪರಪ್ಪನ ಅಗ್ರಹಾರದಲ್ಲಿ ಅವರನ್ನು ಇರಿಸಲಾಗಿದೆ. ನಟ ದರ್ಶನ್‌ ಸೆರೆವಾಸ 7ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: ವರುಣಾರ್ಭಟಕ್ಕೆ ಕೆಆರ್‌ಎಸ್‌ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ

https://youtu.be/acTG2N43Gx8?si=ajGkwt-L1Lns4ezp

ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ಸೇವಿಸಿ ತಡವಾಗಿ ದರ್ಶನ್‌ ನಿದ್ರೆಗೆ ಜಾರಿದ್ದರು. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರವಾಯಿತು. ಎಂದಿನಂತೆ ಬಿಸಿನೀರು ಸೇವಿಸಿದರು. ನಂತರ ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್‌ ಮಾಡಿದರು. ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಕೇಕೆ- ಕಳೆದ ವರ್ಷಕ್ಕಿಂತ ಹೆಚ್ಚು ಪ್ರಕರಣ ದಾಖಲು

Share with Friends
author avatar
News Desk