ರೇಣುಕಾಸ್ವಾಮಿ ಕೊಲೆ ಪ್ರಕರಣ -ದರ್ಶನ್‍ಗೆ 40 ಲಕ್ಷ ಕೊಟ್ಟ ಮೂವರಿಗೆ ನೋಟಿಸ್
ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಹಾಗೂ ಗ್ಯಾಂಗ್‍ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ರೋಚಕ ಟ್ವಿಸ್ಟ್ ಸಿಗುತ್ತಿದೆ.
ರೇಣುಕಾಸ್ವಾಮಿ ಹತ್ಯೆ ಕೇಸ್‍ನಲ್ಲಿ ಮೂವರಿಗೆ ನೋಟಿಸ್ ಕೊಡಲಾಗಿದೆ. ಅದರಲ್ಲೂ ಮಾಜಿ ಉಪಮೇಯರ್ ಮೋಹನ್ ರಾಜ್‍ಗೆ 2ನೇ ಬಾರಿ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ ದುರಂತ – ಸಂತ್ರಸ್ತರ ಕುಟುಂಬಸ್ಥರ ಭೇಟಿ ಮಾಡಿದ ರಾಹುಲ್ ಗಾಂಧಿ
ಪ್ರಕರಣ ಸಂಬಂಧ ವಿಚಾರಣೆಯ ವೇಳೆ ಮೋಹನ್ ರಾಜ್ ರಿಂದ 40 ಲಕ್ಷ ಹಣ ಪಡೆದಿದ್ದ ಬಗ್ಗೆ ದರ್ಶನ್ ಬಾಯ್ಬಿಟ್ಟಿದ್ದಾರೆ. ಹೀಗಾಗಿ ಯಾವ ಉದ್ದೇಶಕ್ಕಾಗಿ ದರ್ಶನ್‍ಗೆ ಹಣ ನೀಡಿದ್ದಾರೆಂದು ತಿಳಿಸಲು ನೋಟಿಸ್ ನೀಡಲಾಗಿದೆ. ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ.
ಪ್ರಕರಣ ಸಂಬಂಧ ಪವಿತ್ರಾಗೌಡ ಸ್ನೇಹಿತೆ ಸಮತಗೂ ನೋಟಿಸ್ ನೀಡಲಾಗಿದೆ. ಆರೋಪಿಯೊಬ್ಬನಿಗೆ ಹಣಕಾಸಿನ ಸಹಾಯ ಮಾಡಿರೋ ಆರೋಪ ಈಕೆಯ ಮೇಲಿದೆ. ಇನ್ನು ಬೆಂಗಳೂರಿನ ಬಿಜೆಪಿ ಶಾಸಕನ ಕಾರು ಚಾಲಕ ಕಾರ್ತಿಕ್ ಪುರೋಹಿತ್‍ನಿಗೂ ನೋಟಿಸ್ ಕೊಡಲಾಗಿದೆ. ಆದರೆ ನೋಟಿಸ್ ತಲುಪುತ್ತಿದ್ದಂತೆಯೇ ಈತ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್ ಆರೋಪಿ ಪ್ರದೋಷ್‍ಗೆ ಕಾರ್ತಿಕ್ ಪುರೋಹಿತ್ ಆಪ್ತ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ಬಿಜೆಪಿಯಿಂದ 3 ತಂಡ ಆಯ್ಕೆ
