Latestಮಂಡ್ಯ-Mandyaರಾಜಕೀಯ | Politicsರಾಜ್ಯ-Karnataka

ಬೇಬಿಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್- ಜೆಡಿಎಸ್‌ಗೆ ಸಿಕ್ತು ಸರ್ಕಾರ ವಿರುದ್ಧ ಹೊಸ ಅಸ್ತ್ರ

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​​​ಗೆ (Trail Blast) ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿರುವುದು ಕಾಂಗ್ರೆಸ್ (Congress) ವಿರುದ್ದ ಜೆಡಿಎಸ್​​ಗೆ (JDS) ಹೊಸ ಅಸ್ತ್ರ ಸಿಕ್ಕಂತಾಗಿದೆ. ಸದ್ಯ ದಳಪತಿಗಳು ಇದೇ ವಿಚಾರವನ್ನ ಮುಂದಿಟ್ಟು ಕೊಂಡು ರಾಜ್ಯ ಸರ್ಕಾರ (State Government) ವಿರುದ್ಧ ಟೀಕೆಗೆ ಹೂಡಿದ್ದಾರೆ.

ಸರ್ಕಾರದ ವಿರುದ್ದ ಸಿಡಿದೆದ್ದಿರುವ ಅನ್ನದಾತರ ಹೋರಾಟಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD.Kumarswamy) ಭೇಟಿ ಮಾಡಿ ಟ್ರಯಲ್ ಬ್ಲಾಸ್ಟ್​ಗೆ ನನ್ನ ವಿರೋಧವಿದೆ ಎಂದು ಕುಮಾರಸ್ವಾಮಿ ಹೇಳಿ ಬೆಂಬಲ ನೀಡಿದ್ದಾರೆ. ಆ ಮೂಲಕ ರೈತರ ವಿಶ್ವಾಸ ಗಿಟ್ಟಿಸಿಕೊಳ್ಳುವ ಜೊತೆಗೆ ‘ಕೈ’ ಸರ್ಕಾರ ವಿರುದ್ದ ಹೋರಾಟಕ್ಕೆ ತಂತ್ರ ಹೊಡಿದ್ದಾರೆ.

ಕೆಆರ್‌ಎಸ್ ಡ್ಯಾಮ್ ಜೊತೆ ಮಂಡ್ಯದ ಜನ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಇದನ್ನು ಬಳಸಿಕೊಂಡು ಜನರ ಪರವಾಗಿ ನಿಲ್ಲುವ ಮೂಲಕ ಕಾಂಗ್ರೆಸ್​​ಗೆ ಸೆಡ್ಡು ಹೊಡೆಯುವ ತಂತ್ರ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಡೆಂಘೀ ರಣಕೇಕೆ: ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಬಾಲಕ ಬಲಿ

https://youtu.be/VNniaOrSpzQ?si=yHBNNPdEQAIFiWsp

ಮತ್ತೊಂದೆಡೆ, ರೈತರಿಗೆ ದಳಪತಿ ಬೆಂಬಲ ಸಿಗುತ್ತಿದ್ದಂತೆಯೇ ಕಾಂಗ್ರೆಸ್ ಕೂಡ ಎಚ್ಚೆತ್ತುಕೊಂಡಿದೆ. ಇಂದು ಉಸ್ತುವಾರಿ‌ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ಕರೆಯಲಾಗಿದೆ. ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದ್ದು, ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

https://youtu.be/0nw_uM87-yw?si=4NP455XuVH1xSUpM

ಚಲುವರಾಯಸ್ವಾಮಿ ಸಭೆಯಲ್ಲಿ ಜಿಲ್ಲೆಯ ಶಾಸಕರು, ಡಿಸಿ, ಎಸ್​​​ಪಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಭಾಗಿಯಾಗುತ್ತಿದ್ದಾರೆ. ಹೀಗಾಗಿ ಈ ಹೈವೋಲ್ಟೇಜ್ ಸಭೆ ಮೇಲೆ ರೈತರು ಚಿತ್ತ ನೆಟ್ಟಿದ್ದಾರೆ. ಇದನ್ನೂ ಓದಿ: ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

https://youtu.be/Vy5sSGwJ5qs?si=Ez8nrjr7-FZLpURc

ಕೆಆರ್​​​ಎಸ್ (KRS) ಜಲಾಶಯಕ್ಕೆ ಅಪಾಯ ಎದುರಾಗುತ್ತದೆ ಎಂದು ಬೇಬಿ ಬೆಟ್ಟದಲ್ಲಿ ಗಣಿಗಾರಿಯನ್ನು ಈ ಹಿಂದೆ ಹೈಕೋರ್ಟ್ ಸೂಚನೆ ಮೇರೆಗೆ ಸ್ಥಗಿತ ಮಾಡಲಾಗಿತ್ತು. ಕಳೆದ ಎರಡು ವರ್ಷಗಳಿಂದ ವಿವಾದಿತ ಸ್ಥಳದಲ್ಲಿ ಗಣಿಗಾರಿಕೆ ನಡೆಯುತ್ತಿಲ್ಲ. ಈ ಮಧ್ಯೆ ಕೆಲ ಗಣಿ ಮಾಲೀಕರು ಹೈಕೋರ್ಟ್ ಮೊರೆ ಹೋಗಿ ರಿಟ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಟ್ರಯಲ್ ಬ್ಲಾಸ್ಟ್ ನಡೆಸಿ, ಜಲಾಶಯಕ್ಕೆ ಅಪಾಯ ಎದುರಾಗುತ್ತದೆಯೇ ಅಥವಾ ಇಲ್ಲವೇ, ಸಾಧಕ ಬಾಧಕಗಳ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ಮಂಡ್ಯ ಜಿಲ್ಲಾಡಳಿತಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಸಾಕಷ್ಟು ವಿರೋಧದ ನಡುವೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.

Share with Friends
author avatar
News Desk