LatestWeatherಬೆಂಗಳೂರು-Bengaluruರಾಜ್ಯ-Karnataka

ಮುಂದಿನ 6 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು (Bengaluru) ಸೇರಿ ಮುಂದಿನ 10 ಜೆಲ್ಲೆಗಳಲ್ಲಿ 6 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮೂನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

https://youtu.be/3G12MZloIRk?si=O4Q8V9UEoJv9NQkE

ಇನ್ನೂ ಬೆಂಗಳೂರಿನಲ್ಲಿ ಭಾನುವಾರ ಹಲವೆಡೆ ಮಳೆಯಾಗಿದೆ. ಮೋಡಕವಿದ ವಾತಾವರಣವಿದ್ದು ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: 100 ಗ್ರಾಮ್ ನುಗ್ಗೆ ಸೊಪ್ಪು ಎಷ್ಟೆಲ್ಲಾ ಕೆಲಸ ಮಾಡುತ್ತೆ ಗೊತ್ತಾ?

ಅಲ್ಲದೇ ಮಂಗಳೂರಿನಲ್ಲಿ ತಾಲೂಕಿನಾದ್ಯಂತ ಮಳೆಯ ಅಬ್ಬರ ಮುಂದುವರಿದಿದ್ದು, ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.08) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ, ದ್ವಿತೀಯ ಪಿಯುಸಿವರೆಗಿನ ಸರ್ಕಾರಿ (PU Colleges), ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮಂಗಳೂರು ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು

ಸಾಂರ್ಧಬಿಕ ಚಿತ್ರ

ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ. ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯೋದು, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಡೆಂಘೀ ರಣಕೇಕೆ: ಸಿಲಿಕಾನ್‌ ಸಿಟಿಯಲ್ಲಿ ಡೆಂಘೀಗೆ ಬಾಲಕ ಬಲಿ

https://youtu.be/B5JIK7HfSMI?si=dKdHvo1n57ElABV2
Share with Friends
author avatar
News Desk