Crime NewsLatestಬೆಂಗಳೂರು-Bengaluruರಾಜ್ಯ-Karnataka

ಹಳೆ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

ಬೆಂಗಳೂರು: ಹಳೆ ವೈಷಮ್ಯ ಹಿನ್ನೆಲೆ ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿದ್ದ ವೇಳೆ ಗ್ರಾಮ ಪಂಚಾಯತಿ (Gram Panchayat) ಸದಸ್ಯನ ಕೊಲೆ (Murder) ಮಾಡಲಾಗಿರುವ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ (Hoskote) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ನಡೆದಿದೆ.

ಅಮಿರ್ ಖಾನ್ (45) ಮೃತ ವ್ಯಕ್ತಿಯನ್ನ ಗುರುತಿಸಲಾಗಿದೆ. ಅಮಿರ್‌ ಅವರು ಗ್ರಾಮ ಪಂಚಾಯತಿ ಕಛೇರಿಯ ಬಳಿ ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಗ್ರಾಮದ ಮೆಹಬೂಬ್ ಇತರೊಂದಿಗೆ ಬಂದು ಲಾಂಗ್ ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ವಿರಕ್ತ ಮಠದ ಶ್ರೀಗಳು ಸಾವು

https://youtu.be/8mAWA5pF-os?si=Fc2SUkdftlRNFIXE

ಇತ್ತ ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಮೀರ್ ಖಾನ್ ಅವರನ್ನು ಕೂಡಲೇ ಎಂ ವಿಜಿ ಆಸ್ಪತ್ರೆಗೆ ಸೇರಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿ ಅಮೀರ್ ಖಾನ್ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮುಂದಿನ 6 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ

https://youtu.be/-vvze5itFjY?si=FEGSM4ObyZVeVP1P

ಘಟನಾ ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಎಂವಿಜೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಸಿಹಿ ಸುದ್ದಿ ಕೊಟ್ಟ ದಿವ್ಯ ವಸಂತ ಈಗ ರಾಜ್ಯದ ಸುದ್ದಿ ವಾಹಿನಿಗಳಲ್ಲಿ ಸದ್ದು

Share with Friends
author avatar
News Desk