Crime NewsLatestರಾಷ್ಟ್ರೀಯ-National

ಹರಿಯಾಣದಲ್ಲಿ ಬಸ್‌ ಪಲ್ಟಿ- 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಂಡೀಗಢ: ಬಸ್‌ ಪಲ್ಟಿಯಾಗಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ಶಾಲಾ ಮಕ್ಕಳು (School Children) ಗಾಯಗೊಂಡಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ (Panchakula Haryana) ನಡೆದಿದೆ.

ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್‌ವೇಸ್ ಬಸ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಇದನ್ನೂ ಓದಿ: 15 ದಿನಗಳ ಮಗಳನೇ ಜೀವಂತ ಸಮಾಧಿ ಮಾಡಿದ ತಂದೆ!

ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ಕುಡಿಯೋಕೆ ನೀರು ಕೊಡ್ತಿಲ್ಲ.. ವಿಷನಾದ್ರೂ ಕೊಡಿ ಎಂದು ಆಕ್ರೋಶ

https://youtu.be/B5JIK7HfSMI?si=KrtNq-iVia33KXkZ

ಸದ್ಯ ಅಪಘಾತಕ್ಕೆ ಬಸ್ ಚಾಲಕನ ಅತಿ ವೇಗವೇ ಕಾರಣ ಎನ್ನಲಾಗಿದೆ. ಬಸ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಅಂದರೆ ಓವರ್‌ಲೋಡ್ ಮತ್ತು ರಸ್ತೆಯ ಕಳಪೆ ಸ್ಥಿತಿ ಕೂಡ ಅಪಘಾತಕ್ಕೆ ಹೆಚ್ಚುವರಿ ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಈ ಪರಿಸ್ಥಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಹಳೆ ವೈಷಮ್ಯಕ್ಕೆ ಗ್ರಾಮ ಪಂಚಾಯತಿ ಸದಸ್ಯನ ಕೊಲೆ

https://youtu.be/-vvze5itFjY?si=fgWvh0DPAo78EBQs
Share with Friends
author avatar
News Desk