Latestಬೆಂಗಳೂರು-Bengaluruರಾಜ್ಯ-Karnataka

ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ – 24 ಗಂಟೆಯಲ್ಲಿ ದಾಖಲೆ ಮಳೆ

ಬೆಂಗಳೂರು: ಕರಾವಳಿಯಲ್ಲಿ (Coastal Karnataka) ಮಳೆಯ ಅಬ್ಬರ ಜೋರಾಗಿದ್ದು 24 ಗಂಟೆಗಳಲ್ಲಿ ದಾಖಲೆಯ ಮಳೆ ಸೃಷ್ಟಿಯಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ. ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ (Heavy Rains) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

https://youtu.be/B5JIK7HfSMI?si=7h0C2vc2PEWslwy3

ಈಗಾಗಲೇ ಈ ಭಾಗದ ಬಹುತೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಉಡುಪಿಯಲ್ಲಿ (Udupi) 24 ಗಂಟೆಯಲ್ಲಿ 210.5 ಮೀ.ಮೀ ಮಳೆ ಬಿದ್ದ ಪರಿಣಾಮ 150ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದನ್ನೂ ಓದಿ: ಹಾವೇರಿ ರಸ್ತೆ ಅಪಘಾತ: ಮೃತರ ಕುಟುಂಬಸ್ಥರಿಗೆ ಸಹಾಯ ಮಾಡಿದ ಶಿವಣ್ಣ ದಂಪತಿ

https://youtu.be/8mAWA5pF-os?si=pDj4DfF6MAB_Mnly

ಕರ್ನಾಟಕದ ಕರಾವಳಿ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ ಇಂದು ಭಾರೀ ಮಳೆಯಾಗಲಿದ್ದು ಐಎಂಡಿ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಿದೆ. ಮುಂದಿನ 4-5 ದಿನ ಈ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- 45 ದಿನಗಳ ಒಳಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ

Share with Friends
author avatar
News Desk