Crime NewsLatestTop Storiesರಾಷ್ಟ್ರೀಯ-National

ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ

https://youtu.be/O4L6RQjcl_M?si=QsCiRmKaStitrKV_

ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು. ಅವರ ಕುಟುಂಬಕ್ಕೆ ನೆರವು ಖಾತ್ರಿಪಡಿಸಬೇಕು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು. ಸರ್ಕಾರದ ವಿವಿಧ ಅಭಿವೃದ್ಧಿ ನಿಧಿಗಳ ಮೇಲ್ವಿಚಾರಣೆ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ‌. . ಇದನ್ನೂ ಓದಿ: ಹಗರಣಗಳ ವಿರುದ್ಧ ಬಿಜೆಪಿ ಕಿಡಿ- ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ

Share with Friends
author avatar
News Desk