ಜಾನುವಾರು ಮೈ ತೊಳೆಯಲು ಹೋದ ಯುವಕ ಕಾಲು ಜಾರಿ ನೀರುಪಾಲು
ಹಾವೇರಿ: ಆಕಳು (Cow) ಮೈ ತೊಳೆಯಲು ಹೋಗಿದ್ದ ವೇಳೆ ಯುವಕನೋರ್ವ ವರದಾ ನದಿಯಲ್ಲಿ (River) ನೀರು ಪಾಲಾದ ಘಟನೆ ಹಾವೇರಿ (Haveri) ತಾಲೂಕಿನ ಹಂದಿಗನೂರು (Handiganur) ಗ್ರಾಮದ ಬಳಿ ನಡೆದಿದೆ.
ಮೃತ ಯುವಕನನ್ನು ಗಾಳೆಪ್ಪ ಮೇಲಿನಮನಿ (24) ಎಂದು ಗುರುತಿಸಲಾಗಿದೆ. ಆಕಳು ಮೇಯಿಸಿಕೊಂಡು ನಂತರ ಆಕಳಿನ ಮೈ ತೊಳೆಯಲು ಗಾಳೆಪ್ಪ ನದಿಗೆ ಬಂದಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಸಿಬಿಐನಿಂದ ತನಿಖೆ ತೀವ್ರಗೊಳಿಸಿವುಂತೆ ಪತ್ರ ಬರೆದ ಶೋಭಾ ಕರಂದ್ಲಾಜೆ
ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ನೀರು ಪಾಲಾದ ಗಾಳೆಪ್ಪನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.ಇದನ್ನೂ ಓದಿ: ಹಗರಣಗಳ ವಿರುದ್ಧ ಬಿಜೆಪಿ ಕಿಡಿ- ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ
ಘಟನಾ ಸ್ಥಳದಲ್ಲಿ ಗಾಳೆಪ್ಪನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2028ರ ಚುನಾವಣೆಗೆ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ಕೆಲಸ ಮಾಡಿ: ಡಿಕೆಶಿ
