BlogLatestವಿದೇಶ-International

ಓಮನ್ ಕರಾವಳಿಯಲ್ಲಿ ಮುಳುಗಿದ ತೈಲ ಹಡಗು, 13 ಭಾರತೀಯರು ನಾಪತ್ತೆ

ಓಮನ್ ಜು. 17: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಹಡಗು ಮುಳುಗಿದ್ದು, ಅದರಲ್ಲಿದ್ದ 13 ಮಂದಿ ಭಾರತೀಯರು ಸೇರಿ 16 ಮಂದಿ ಸಿಬ್ಬಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ.

ಕಾಣೆಯಾದವರ ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿವೆ. ಆದರೆ ಇಲ್ಲಿಯವರೆಗೆ ಅವರಲ್ಲಿ ಯಾರೊಬ್ಬರ ಕುರುಹು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು ಎಂದು ಕಡಲ ಭದ್ರತಾ ಕೇಂದ್ರವು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದೆ.

ಕೊಮೊರೊಸ್‌‍ ಧ್ವಜದ ತೈಲ ಟ್ಯಾಂಕರ್‌ ಪ್ರೆಸ್ಟೀಜ್‌ ಫಾಲ್ಕನ್‌ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು ಎಂದು ಕಡಲ ಭದ್ರತಾ ಕೇಂದ್ರವು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದೆ.ಒಮಾನಿ ಬಂದರಿನ ಡುಕ್‌ ಬಳಿ ರಾಸ್‌‍ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್‌ ಮೈಲುಗಳಷ್ಟು ದೂರದಲ್ಲಿ ಹಡಗು ಮುಳುಗಿದೆ ಎಂದು ತಿಳಿಸಿದೆ.

https://sampoornanews.in/hasanamba-darshan-from-24th-oct-to-3rd-nov

2007 ರಲ್ಲಿ ನಿರ್ಮಿಸಲಾದ ಈ ಹಡಗು 117 ಮೀಟರ್‌ ಉದ್ದದ ತೈಲ ಉತ್ಪನ್ನಗಳ ಟ್ಯಾಂಕರ್‌ ಆಗಿದೆ ಎಂದು ಐಇಉ ಯ ಶಿಪ್ಪಿಂಗ್‌ ಡೇಟಾದಿಂದ ಮಾಹಿತಿ ಲಭ್ಯವಾಗಿದೆ. ಸಾಮಾನ್ಯವಾಗಿ ಅಂತಹ ಸಣ್ಣ ಟ್ಯಾಂಕರ್ಗಳನ್ನು ಸಣ್ಣ ಪ್ರಯಾಣಕ್ಕಾಗಿ ನಿಯೋಜಿಸಲಾಗುತ್ತದೆ.ಡುಕ್‌ ಬಂದರು ಒಮಾನ್ನ ನೈಋತ್ಯ ಕರಾವಳಿಯಲ್ಲಿದೆ, ಇದು ದೇಶದ ಪ್ರಮುಖ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳ ಪ್ರಮುಖ ಕೇಂದ್ರವಾಗಿದೆ.

Share with Friends
author avatar
News Desk