BlogCrime NewsLatestTop Stories

ಜೈಲಲ್ಲಿ ನಟ ದರ್ಶನ್ ಭೇಟಿಯಾಗಿದ್ದೆ ಎಂದ ಮಾಜಿ ಖೈದಿಗೆ ನೋಟಿಸ್..!?

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಭೇಟಿಯಾಗಿದ್ದಾಗಿ, ಯೋಗ, ಧ್ಯಾನ ಹೇಳಿಕೊಟ್ಟಿದ್ದಾಗಿ ಯೂಟ್ಯೂಬ್ ಚಾನೆಲ್​ಗಳಿಗೆ ಸಂದರ್ಶನ ನೀಡಿದ್ದ ಮಾಜಿ ಖೈದಿ ಸಿದ್ಧರೂಢನಿಗೆ ಪೊಲೀಸ್ ನೋಟಿಸ್ ಸಾಧ್ಯತೆ ಇದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅನ್ನು ಭೇಟಿಯಾಗಿದ್ದಾಗಿ ಹೇಳಿದ್ದ ಮಾಜಿ ಖೈದಿ ಸಿದ್ಧಾರೂಢ ಮಾಧ್ಯಮಗಳಿಗೆ, ಯೂಟ್ಯೂಬ್ ಚಾನೆಲ್​ಗಳಿಗೆ ಸಂದರ್ಶನ ನೀಡಿ ತಾನು ಜೈಲಿನಲ್ಲಿ ದರ್ಶನ್ ಭೇಟಿಯಾಗಿ ದರ್ಶನ್​ಗೆ ಯೋಗ, ಧ್ಯಾನ ಹೇಳಿಕೊಟ್ಟೆ ಎಂದಿದ್ದ.

ದರ್ಶನ್ ಜೊತೆಗೆ ಹಲವು ಸಮಯ ಮಾತನಾಡಿದೆ ಎಂದೆಲ್ಲ ಹೇಳಿಕೊಂಡಿದ್ದ ಮಾಜಿ ಖೈದಿ ಸಿದ್ಧರೂಢನ ಮಾತನ್ನು ಸಂಪೂರ್ಣವಾಗಿ ಅಲ್ಲಗಳೆದಿರುವ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನಿರ್ಧರಿಸಿದ್ದಾರೆ. ಸಿದ್ಧರೂಢನಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಸನ್ನಡತೆ ಆಧಾರಮ ಮೇಲೆ ಜೈಲಿನಿಂದ ಹೊರಗಡೆ ಬಂದ ಬಳಿಕ ಸಿದ್ದರೂಢ ಮಾಧ್ಯಮದವರ ಮುಂದೆ ಈ ಬಗ್ಗೆ ಹೇಳಿ ನೀಡಿದ್ದರು. ಬಳಿಕ ಈ ಬಗ್ಗೆ ಜೈಲಾಧಿಕಾರಿಗಳು ಚರ್ಚೆ ನಡೆಸಿದ್ದು, ಇದೀಗ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಇದನ್ನು ಗಮನಿಸಿದರೆ, ಸುಮ್ಮನೆ ಇರಲಾರದೇ ಇರುವೆ ಬಿಟ್ಟುಕೊಂಡರು ಎನ್ನುವ ಪರಿಸ್ಥಿತಿ ತುರುವನೂರು ಮೂಲದ ಸಿದ್ಧರೂಢನಿಗೆ ಬಂದೊದಗಿದೆ.

Share with Friends
author avatar
News Desk