BlogLatestTop Storiesಸ್ಯಾಂಡಲ್​ವುಡ್-Sandalwood

ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್​ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಹಿನ್ನಡೆಯಾದ ಕಾರಣ ದರ್ಶನ್​ ಪರ ವಕೀಲರು ಮನೆ ಊಟದ ಅರ್ಜಿಯನ್ನು ವಾಪಾಸ್​ ಪಡೆದುಕೊಂಡಿದ್ದಾರೆ.

ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಮನೆ ಊಟಕ್ಕೆ ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಬಳಿಕ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಯಿತು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿಯೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್​ ಸೂಚನೆ ನೀಡಿತ್ತು. ಈಗಾಗಲೇ ಮ್ಯಾಜಿಸ್ಟ್ರೇಟ್​ ಕೋರ್ಟ್​ನಲ್ಲಿ ಈ ಅರ್ಜಿಗೆ ಹಿನ್ನಡೆಯಾಗಿತ್ತು. ಈಗ ಮತ್ತೆ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಹೋಗುವಂತೆ ಹೈಕೋರ್ಟ್​ ಹೇಳಿದ್ದರಿಂದ ದರ್ಶನ್​ ಪರ ವಕೀಲರು ಅರ್ಜಿ ವಾಪಾಸ್​ ಪಡೆದಿದ್ದಾರೆ.

ಜೈಲು ಊಟ ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಹಿನ್ನಲೆ ನಟ ದರ್ಶನ್​ ಮನೆ ಊಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದರೊಂದಿಗೆ ನ್ಯಾಯಲಯದಲ್ಲಿ ಮನೆ ಊಟದ ಅರ್ಜಿಗೆ ಅನುಮತಿ ಸಿಗುವ ನಿರೀಕ್ಷೆಯಲ್ಲಿದ ನಟ ದರ್ಶನ್​ಗೆ ಮತ್ತೊಮ್ಮೆ ನಿರಾಸೆಯಾಗಿದೆ.

Share with Friends
author avatar
News Desk