BlogLatestTop Storiesಬೆಂಗಳೂರು-Bengaluru

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ; ಆರೋಪಿ ಕರೆತಂದು ಸ್ಥಳ ಮಹಜರು

ಬೆಂಗಳೂರು: ಬಾಂಬ್​ ಸ್ಫೋಟ ಸಂಭವಿಸಿದ್ದ ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಎನ್ಐಎ ಸ್ಥಳ ಮಹಜರು ನಡೆಸಿದೆ. ಬಂಧಿತ ಉಗ್ರ ಮುಸಾವಿರ್ ಹುಸೇನ್ ಶಾಜೀಬ್’ನನ್ನು ಇಂದು ಕೆಫೆ ಬಳಿ ಕರೆತಂದು ಎನ್ಐಎ ಅಧಿಕಾರಿಗಳು ಆರೋಪಿಯ ಕೃತ್ಯದ ಮರುಸೃಷ್ಟಿ ಮಾಡಿಸಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಆರೋಪಿಗಳಾದ ಮಸ್ಸಾವೀರ್, ಅಬ್ಧುಲ್ ಮತೀನ್ ತಹಾ ಅವರನ್ನು ಕರೆದುಕೊಂಡ ಬಂದ ಎನ್‌ಐಎ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿದೆ.

ಮಾರ್ಚ್ 1ರಂದು ಬೆಂಗಳೂರಿನ ಐಟಿಪಿಎಲ್​ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಮಾರ್ಚ್ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆ ವೇಳೆ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಈ ಪ್ರಕರಣದ ಮಾಸ್ಟರ್ ಮೈಂಡ್​​ಗಳೆಂದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಇಬ್ಬರೂ ಆರೋಪಿಗಳನ್ನು ಏಪ್ರಿಲ್ 12 ರಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.

Share with Friends
author avatar
News Desk