BlogLatestTop Storiesರಾಷ್ಟ್ರೀಯ-National

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಗುಂಡಿಕ್ಕಿ ಬಿಜೆಪಿ ಮುಖಂಡನ ಹತ್ಯೆ

ಪಾಟ್ನಾ : ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ ಎಂದು ಗುರುತಿಸಲಾಗಿದೆ.

ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಬಿಜೆಪಿ ನಾಯಕ ಮತ್ತು ಡೈರಿ ಬೂತ್ ಆಪರೇಟರ್ 50 ವರ್ಷದ ಶಾ ಎಂಬುವವರನ್ನು ದುಷ್ಕರ್ಮಿಗಳು ರಾತ್ರಿ 10 ಗಂಟೆ ಸುಮಾರಿಗೆ ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗುಂಡಿನ ಸದ್ದು ಕೇಳಿದ ಬಳಿಕ ಕುಟುಂಬಸ್ಥರು ಹೊರಗೆ ಬಂದು ಗಾಯಾಳು ಶಾ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನಂತರ ಚಿಕಿತ್ಸೆಗಾಗಿ ಎನ್‌ಎಂಸಿಎಚ್‌ಗೆ ಕರೆದೊಯ್ದರು, ಅಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Share with Friends
author avatar
News Desk