BlogLatestTop Storiesರಾಷ್ಟ್ರೀಯ-National

ಹಿಂಡೆನ್‌ಬರ್ಗ್ ಆರೋಪ : ದೇಶಾದ್ಯಂತ ಆ.22ರಂದು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್​

ನವದೆಹಲಿ: ಅಮೆರಿಕದ ಸಂಶೋಧನೆ ಮತ್ತು ಹೂಡಿಕೆ ಕಂಪನಿ ಹಿಂಡೆನ್‌ಬರ್ಗ್ ಮಾಡಿರುವ ಆರೋಪಗಳ ಕುರಿತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರ ರಾಜೀನಾಮೆಗೆ ಒತ್ತಾಯಿಸಿ ಆಗಸ್ಟ್​​ 22ರಂದು ರಾಷ್ಟ್ರವ್ಯಾಪಿ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಮುಂದಾಗಿದೆ.ಇತ್ತೀಚೆಗೆ ಹಿಂಡೆನ್‌ಬರ್ಗ್ ತನ್ನ ವರದಿಯಲ್ಲಿ ಸೆಬಿ ಅಧ್ಯಕ್ಷೆ ಮಾಧಬಿ ಬುಚ್ ಮತ್ತು ಅವರ ಪತಿ ಧವಲ್​ ಬುಚ್​​​ ಕಡಲಾಚೆಯ ಅದಾನಿ ಸಂಸ್ಥೆಗಳಲ್ಲಿ ಪಾಲನ್ನು ಹೊಂದಿದ್ದಾರೆ ಎಂದು ಆರೋಪಿಸಿತ್ತು.

ಇದನ್ನೇ ಮುಂದಿಟ್ಟುಕೊಂಡು ಆಗಸ್ಟ್​​​ 22ರಂದು ದೇಶಾದ್ಯಂತ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿ ರಾಜ್ಯದ ರಾಜಧಾನಿಯಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯನ್ನು ಘೇರಾವ್ ಮಾಡಲು ಕಾಂಗ್ರೆಸ್ ಮುಂದಾಗಿದೆ.

ಎರಡು ಬೇಡಿಕೆಗಳಿಗಾಗಿ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಮೊದಲನೆಯದಾಗಿ ಸೆಬಿ ಅಧ್ಯಕ್ಷೆ ಮಧಬಿ ಪುರಿ ಬುಚ್​ ರಾಜೀನಾಮೆ ನೀಡಬೇಕು. ಮತ್ತೊಂದು ಅದಾನಿ ಗ್ರೂಪ್​ ಹಗರಣದ ತನಿಖೆಗೆ ಜೆಪಿಸಿ ರಚಿಸಬೇಕು. ನಾವು ಈ ಎರಡು ವಿಷಯಗಳಿಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಆಂದೋಲನವನ್ನು ನಡೆಸಲು ಸರ್ವಾನುಮತದಿಂದ ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಕೆ.ಸಿ.ವೇಣುಗೋಪಾಲ್​ ತಿಳಿಸಿದರು.

Share with Friends
author avatar
News Desk