Latestಚುನಾವಣೆ-Electionರಾಷ್ಟ್ರೀಯ-National

Election Results: ಮಂಡಿಯಲ್ಲಿ ಕಂಗನಾಗೆ ಭರ್ಜರಿ ಗೆಲುವು

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ (BJP) ಅಭ್ಯರ್ಥಿಯಾಗಿ ಕಂಗನಾ ರಣಾವತ್ (Kangana Ranaut)ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮೊದಲ ಸ್ಪರ್ಧೆಯಲ್ಲಿ 70000 ಮತಗಳಿಂದ ನಟಿ ಗೆದ್ದು, ಬೀಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.


ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕಂಗನಾ ರಣಾವತ್ (Kangana Ranaut) ಮೊದಲ ಸ್ಪರ್ಧೆಯಲ್ಲಿ ಗೆದ್ದು ಬೀಗಿದ್ದಾರೆ. 70000 ಮತಗಳಿಂದ ನಟಿ ಗೆದ್ದಿದ್ದಾರೆ. ಈ ಮೂಲಕ ನಟಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ

https://youtu.be/bkuh9l3KgRk?si=mdtFfBsO7Go9Tc5Y

ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಮುಂದೆ ಕಂಗನಾ ಅವರು ಪಣ ತೊಟ್ಟಂತೆ ಸ್ಪರ್ಧೆ ಮಾಡಿ ಗೆದ್ದು ತೋರಿಸಿದ್ದಾರೆ. ಟಫ್ ಫೈಟ್ ಕೊಟ್ಟು ನಟಿ ಗೆದ್ದಿರೋದಕ್ಕೆ ನಟಿಯ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.‌ಇದನ್ನೂ ಓದಿ: ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್‌.ಡಿ ಕುಮಾರಸ್ವಾಮಿ

https://youtu.be/lc15CaHVVn4?si=wjU4yNg2PFutuy9t

ಅಂದಹಾಗೆ, ಲೋಕಸಭಾ ಚುನಾವಣೆ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ನಟಿ ಹೇಳಿದ್ದರು. ಹಾಗಾದ್ರೆ ನಟಿ ಬಾಲಿವುಡ್‌ಗೆ ಗುಡ್ ಬೈ ಹೇಳ್ತಾರಾ ಎಂದು ನೆಟ್ಟಿಗರಲ್ಲಿ ಇದೀಗ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ

Share with Friends
author avatar
News Desk